ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆ: ಬೆಂ.ಗ್ರಾ.ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿ

ಬೆಂಗಳೂರು: ರಾಜ್ಯ ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಒಟ್ಟು 102 ಗ್ರಾಮ ಪಂಚಾಯಿತಿಗಳ ಪೈಕಿ ಅವಧಿ ಪೂರ್ಣಗೊಳ್ಳದಿರುವ 09 ಗ್ರಾಮ ಪಂಚಾಯಿತಿಗಳನ್ನು ಹೊರತುಪಡಿಸಿ 93 ಗ್ರಾಮ ಪಂಚಾಯಿತಿಗಳಿಗೆ ಚುನಾವಣಾ ವೇಳಾ ಪಟ್ಟಿ ಪ್ರಕಟಿಸಿದ್ದು, ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2020ರ ನವೆಂಬರ್ 30 ರಿಂದ ಡಿಸೆಂಬರ್ 31 ರ ಸಂಜೆ 5-00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ನೀತಿ ಸಂಹಿತೆಯು ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ನಗರ ಪಾಲಿಕೆ, ಮಹಾನಗರ ಪಾಲಿಕೆ ಪ್ರದೇಶಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್.ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋವಿಡ್-19ರ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಎರಡು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತದ ಚುನಾವಣೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ 26 ಗ್ರಾಮ ಪಂಚಾಯಿತಿಗಳು ಹಾಗೂ ನೆಲಮಂಗಲ ತಾಲ್ಲೂಕಿನ 21 ಗ್ರಾಮ ಪಂಚಾಯಿತಿಗಳಲ್ಲಿ ನಡೆಯಲಿದೆ. 

2020ರ ಡಿಸೆಂಬರ್ 07 ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನವಾಗಿದ್ದು, ಡಿಸೆಂಬರ್ 11 ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ಡಿಸೆಂಬರ್ 12 ರಂದು ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದ್ದು, ಡಿಸೆಂಬರ್ 14 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. 

ಮತದಾನ ಅವಶ್ಯವಿದ್ದರೆ, ಡಿಸೆಂಬರ್ 22 ರಂದು ಬೆಳಿಗ್ಗೆ 7.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅಗತ್ಯ ಇದ್ದಲ್ಲಿ ಡಿಸೆಂಬರ್ 24 ರಂದು ಮತದಾನ ನಡೆಯಲಿದೆ. ಡಿಸೆಂಬರ್ 30 ರಂದು ಬೆಳಿಗ್ಗೆ 8.00 ಗಂಟೆಯಿಂದ ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಡಿಸೆಂಬರ್ 31 ರಂದು ಚುನಾವಣಾ ಮಾದರಿ ನೀತಿ ಸಂಹಿತೆ ಮುಕ್ತಾಯಗೊಳ್ಳಲಿದೆ.

ಎರಡನೇ ಹಂತದ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ 26 ಗ್ರಾಮ ಪಂಚಾಯಿತಿಗಳು ಹಾಗೂ ದೇವನಹಳ್ಳಿ ತಾಲ್ಲೂಕಿನ 20 ಗ್ರಾಮ ಪಂಚಾಯಿತಿಗಳಲ್ಲಿ ನಡೆಯಲಿದೆ. 2020ರ ಡಿಸೆಂಬರ್ 11 ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನವಾಗಿದ್ದು, ಡಿಸೆಂಬರ್ 16 ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ಡಿಸೆಂಬರ್ 17 ರಂದು ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದ್ದು, ಡಿಸೆಂಬರ್ 19 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ, ಡಿಸೆಂಬರ್ 27 ರಂದು ಬೆಳಿಗ್ಗೆ 7.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅಗತ್ಯ ಇದ್ದಲ್ಲಿ ಡಿಸೆಂಬರ್ 29 ರಂದು ಮತದಾನ ನಡೆಯಲಿದೆ. 

ಡಿಸೆಂಬರ್ 30 ರಂದು ಬೆಳಿಗ್ಗೆ 8.00 ಗಂಟೆಯಿಂದ ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಡಿಸೆಂಬರ್ 31 ರಂದು ಚುನಾವಣಾ ಮಾದರಿ ನೀತಿ ಸಂಹಿತೆ ಮುಕ್ತಾಯಗೊಳ್ಳಲಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 04 ತಾಲ್ಲೂಕುಗಳಿದ್ದು, ಒಟ್ಟು 102 ಗ್ರಾಮ ಪಂಚಾಯಿತಿಗಳ ಪೈಕಿ 93 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು 799 ಮೂಲ ಮತಗಟ್ಟೆಗಳಿದ್ದು, 87 ಆಕ್ಸಿಲರಿ ಮತಗಟ್ಟೆಗಳು ಸೇರಿದಂತೆ ಒಟ್ಟು 886 ಮತಗಟ್ಟೆಗಳಿವೆ.

ಜಿಲ್ಲೆಯಲ್ಲಿ 2,61,776 ಪುರುಷ ಮತದಾರರು, 2,58,831 ಮಹಿಳಾ ಮತದಾರರು ಹಾಗೂ ಇತರೆ ವರ್ಗಕ್ಕೆ ಸೇರಿದ 42 ಮತದಾರರಿದ್ದು, ಒಟ್ಟು 520649 ಮತದಾರರಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್.ರವೀಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿ, ಮಾಹಿತಿಗಾಗಿ Harithalekhaniಯನ್ನು Facebook / Twitterಗಳಲ್ಲಿ ಅನುಸರಿಸಿ.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]