ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2020-21ನೇ ಸಾಲಿನಲ್ಲಿ ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಗುರುಶಿಷ್ಯ ಪರಂಪರೆ ತರಬೇತಿ ಕಾರ್ಯಕ್ರಮದಡಿ ಜಾನಪದ ಕಲಾಪ್ರಕಾರಗಳಾದ ಗೀಗೀಪದ, ಡೊಳ್ಳುಕುಣಿತ, ತಮಟೆ ಹಾಗೂ ಕರ್ನಾಟಕ/ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ಗಮಕ, ನೃತ್ಯ, ಕಥಾ ಕೀರ್ತನ ಈ ಪ್ರಕಾರಗಳಲ್ಲಿ 3 ಮೂರು ತಿಂಗಳ ತರಬೇತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯು 20 ಕಲಿಕಾ ಅಭ್ಯರ್ಥಿಗಳನ್ನು ಒಳಗೊಂಡಿದ್ದು, ಅಭ್ಯರ್ಥಿಗಳು 18 ರಿಂದ 35 ವರ್ಷದ ಒಳಗಿನವರಾಗಿರಬೇಕು, ಮಹಿಳಾ ಅಭ್ಯರ್ಥಿಗಳು ಹಾಗೂ ಅಂಗವಿಕಲರು ಅರ್ಜಿಗಳನ್ನು ಸಲ್ಲಿಸಬಹುದು.
ಯೋಜನೆಯ ಪೂರ್ಣ ವಿವರಗಳನ್ನು ಸೇವಾ ಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್ ಸೈಟ್: www.kannadasiri.karnataka.gov.in ಇಲ್ಲಿ ಪಡೆಯಬಹುದಾಗಿದೆ.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಕಡ್ಡಾಯವಾಗಿ ಜಾತಿ ಪ್ರಮಾಣಪತ್ರ (ಖಆ ಸಂಖ್ಯೆ ಇರುವ), ಆಧಾರ ಕಾರ್ಡ, ರೇಷನ್ ಕಾರ್ಡ್ಗಳ ಜೆರಾಕ್ಸ ಪ್ರತಿಗಳೊಂದಿಗೆ ಅರ್ಜಿಗಳನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು 2020ರ ಡಿಸೆಂಬರ್ 10 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಿಲ್ಲಾಡಳಿತ ಭವನ, ಚಪ್ಪರಕಲ್ಲು, ದೇವನಹಳ್ಳಿ ತಾಲ್ಲೂಕು ಹಾಗೂ ದೂರವಾಣಿ ಸಂಖ್ಯೆ: 080-29560059 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಬಿ.ಮಂಜುನಾಥ ಆರಾಧ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ತಾಜಾ ಸುದ್ದಿ, ಮಾಹಿತಿಗಾಗಿ Harithalekhaniಯನ್ನು Facebook / Twitterಗಳಲ್ಲಿ ಅನುಸರಿಸಿ.

