ಕನಕದಾಸರ ಆದರ್ಶ ಅನುಕರಣೀಯ:ಪ್ರೀತಂ ಗೌಡ

ಹಾಸನ: ಕನಕದಾಸರು ನಾಡು ಕಂಡ ಸಂತ ಶ್ರೇಷ್ಠ ರಲ್ಲೊಬ್ಬರಾಗಿದ್ದು  ಅವರ ಆದರ್ಶಗಳು ಎಲ್ಲರಿಗೂ ಅನುಕರಣೀಯ ಎಂದು ಶಾಸಕರಾದ ಪ್ರೀತಂ ಜೆ ಗೌಡ ಅವರು ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲಾಡಳಿತ ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ  ಜಿಲ್ಲಾಧಿಕಾರಿ ಕಚೇರಿ‌ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಂತ ಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಜನರ ಮನಸ್ಸುಗಳನ್ನು ಬದಲಿಸುತ್ತಾ ಸಮಾಜವನ್ನು ಸರಿದಾರಿಗೆ ತರುಲು ಶ್ರಮಿಸಿದರು.  ಅವರ ಜೀವನ ಹಾಗೂ ಸಾಹಿತ್ಯ ಎರಡೂ ನಮಗೆ ಉತ್ತಮ ಮಾರ್ಗವನ್ನು ತೋರುತ್ತವೆ ಎಂದರು . 

ಕೋವಿಡ್ ಕಾರಣದಿಂದ ಈ‌ ಬಾರಿ‌ ಸರಳವಾಗಿ ಕನಕ ಜಯಂತಿ ಆಚರಿಸಲಾಗಿದೆ ಮುಂದಿನ ವರ್ಷ   ಇನ್ನಷ್ಟು ಉತ್ತಮವಾಗಿ ಕಾರ್ಯಕ್ರಮ ಆಯೋಜಿಸೋಣ ಎಂದು ಶಾಸಕರು ಹೇಳಿದರು.

ಜಿಲ್ಲಾಧಿಕಾರಿ ಆರ್.ಗಿರೀಶ್ ಮಾತನಾಡಿ  ಕುಲ ಕುಲವೆಂದು ಬಡಿದಾಡದಿರಿ… ಎಂದು ಕನಕದಾಸರು ನೀಡಿದ‌ ಸಂದೇಶ  ಇಂದಿಗೂ ಪ್ರಸ್ತುತ.

ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಅವಕಾಶ ನೀಡಲಾಗಿದೆ .ಆದರೆ  ನಮ್ಮ ಮನಸ್ಥಿತಿಗಳು ಬದಲಾವಣೆಯಾಗಬೇಕು ಎಂದರು.

ಕನಕದಾಸರು ದೇವರು ಭಕ್ತಿಗೆ ಮಾತ್ರ ಒಲಿಯುತ್ತಾನೆ ಹೊರತು  ಜಾತಿಗಲ್ಲ ಎಂಬುದನ್ನು ತೋರಿಸಿದ್ದಾರೆ. ಅವರ ಆದರ್ಶಗಳು ಎಲ್ಲರೂ ಪಾಲಿಸೋಣ ಎಂದು ಜಿಲ್ಲಾಧಿಕಾರಿ ಆರ್.ಗಿರಿಶ್ ತಿಳಿಸಿದರು.

ಕೋವಿಡ್ ಹಿನ್ನಲೆಯಲ್ಲಿ ಜನರು‌ ಜಾಗೃತರಾಗಬೇಕು .ಸಾಮಾಜಿಕ ಅಂತರ ಕಾಯ್ದುಕೊಂಡು ಸೋಂಕಿನಿಂದ‌ ದೂರ ಉಳಿಯಬೇಕು ಎಂದು ಜಿಲ್ಲಾಧಿಕಾರಿ ಕರೆ‌ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ.ಪರಮೇಶ್ ಅವರು‌ ಮಾತನಾಡಿ  ಕನಕದಾಸರು 16 ನೇ ಶತಮಾನದಲ್ಲಿ  ಸಾಮಾಜಿಕ ಕ್ರಾಂತಿಯ ಹಾದಿ ತೋರಿದವರು.

ಹುಟ್ಟಿನಲ್ಲಿ ಕೆಳ ವರ್ಗದಲ್ಲಿದ್ದರೂ , ನಂತರ ಜ್ಞಾನ ಸಂಪಾದಿಸಿ ಮನ ಪರಿವರ್ತನೆ ಗೊಂಡು ಭಕ್ತಿ ಮಾರ್ಗದಲ್ಲಿ ಸಾಗಿ ಸಮಾಜ ಸುಧಾರಣೆಗೆ ಪ್ರೇರಣೆಯಾದರು ಎಂದು ಹೇಳಿದರು .

ಕನಕದಾಸರು ಎಲ್ಲಾ ಜನ ಸಮುದಾಯಗಳಿಗೂ  ಸೇರಿದ ಮಹಾನ್ ಪುರುಷರಾಗಿದ್ದಾರೆ ಎಂದು ಅವರು ಹೇಳಿದರು .

ಜಿಲ್ಲಾ ಕುರುಬರ ಸಂಘದ ಅಧ್ಯಕ್ಷರಾದ ಪಟೇಲ್ ಶಿವಪ್ಪ ಅವರು ಮಾತನಾಡಿ  ಸಮಾಜದಲ್ಲಿನ ಮೇಲು ಕೀಳು ವ್ಯವಸ್ಥೆ ವಿರುದ್ದ ಶತಮಾನಗಳ ಹಿಂದೆಯೇ ಕನಕದಾಸರು ಧ್ವನಿ ಎತ್ತಿದವರು.

ಬಸವಣ್ಣನವರ ತತ್ವ ಸಿದ್ದಾಂತ ಗಳಂತೆ ಕನಕದಾಸರೂ ಸಹ  ಸಾಮಾಜಿಕ‌ ಅಸಮಾನತೆಗಳ ವಿರುದ್ದ ಅರಿವು ಮಾಡಿಸಿದ್ದಾರೆ ಎಂದರು .

ಎಲ್ಲಾ ಮಹಾನಾಯಕರನ್ನು ಕೇವಲ ಒಂದೊಂದು ಜಾತಿಗೆ ಸೀಮಿತಗೊಳಿಸದೆ  ಎಲ್ಲಾ ಸಮುದಾಯಗಲೂ  ಅವರ ಮೌಲ್ಯಗಳನ್ನು ಅರಿತು ಪಾಲನೆ ಮಾಡಬೇಕು ಎಂದು ಪಟೇಲ್ ಶಿವಪ್ಪ ಹೇಳಿದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ವಾಗಿ‌ ಮಾತನಾಡಿದ ಕನ್ನಡ ಮತ್ತು‌ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಸುದರ್ಶನ್ ಅವರು  ಕನಕದಾಸರ ಜೀವನ, ಸಾಹಿತ್ಯ ಶ್ರೇಷ್ಠತೆ , ಆದರ್ಶ, ಭಕ್ತಿ ಮಾರ್ಗ ದಲ್ಲಿ ಕಂಡ ಸತ್ಯಗಳು, ಸಾಮಾಜಿಕ ಪರಿವರ್ತನೆಗೆ ಮಾಡಿದ ಪ್ರಯತ್ನಗಳು ಮತ್ತು ಅವರ ಕೊಡುಗೆಗಳ ಬಗ್ಗೆ ವಿವರಿಸಿದರು.

ಜಾತಿ ವ್ಯವಸ್ಥೆ, ಸಾಮಾಜಿಕ ಅಸಮಾನತೆ ವಿರುದ್ದ ಧ್ವನಿ ಎತ್ತಿ ಸಮಾಜ ಸುಧಾರಣೆಗೆ ಕನಕದಾಸರು ದೊಡ್ಡ ಕೊಡುಗೆ ನೀಡಿದ್ದಾರೆ ಎಂದರು.

 ಅಪರ ಪೋಲಿಸ್ ವರಿಷ್ಠಾಧಿಕಾರಿ ನಂದಿನಿ , ಉಪ ವಿಭಾಗಾಧಿಕಾರಿ ಬಿ .ಎ ಜಗದೀಶ್ ,ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷರಾದ ಸಿದ್ದೇಗೌಡ ಸ್ವಾತಂತ್ರ್ಯ ಹೋರಾಟಗಾರಾದ ಹೆಚ್.ಎಂ ಶಿವಣ್ಣ,ಸರ್ಕಾರಿ ‌ನೌಕರರ ಸಂಘದ ಅಧ್ಯಕ್ಷರಾದ ಕೃಷ್ಣೇಗೌಡ ,ತಾಲ್ಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ನಿಂಗೇಗೌಡ,ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್  ಮತ್ತಿತರರು ಹಾಜರಿದ್ದರು

ಕ್ಷಣ ಕ್ಷಣದ ತಾಜಾ ಸುದ್ದಿ, ಮಾಹಿತಿಗಾಗಿ Harithalekhaniಯನ್ನು Facebook / Twitterಗಳಲ್ಲಿ ಫಾಲೋ ಮಾಡಿ

ರಾಜಕೀಯ

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ ಕುಸಿದಿದೆ. ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಕೇಂದ್ರ

[ccc_my_favorite_select_button post_id="121597"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]