ಕೃಷಿ ಸಚಿವ ಬಿ.ಸಿ.ಪಾಟೀಲ್ ಭೇಟಿ ಮಾಡಿದ ಇಸ್ರೇಲ್ ಕನ್ಸಲೇಟ್ ಜನರಲ್

ಬೆಂಗಳೂರು: ಇಸ್ರೇಲ್ ಕನ್ಸಲೇಟ್ ಜನರಲ್ ಜೊನಾಥನ್ ಜಡ್ಕಾ ಹಾಗೂ ಮಿಷನ್ ಉಪಮುಖ್ಯಸ್ಥ ಏರಿಯನಲ್ ಸೀಡ್ಮನ್ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರನ್ನು ಭೇಟಿ ಮಾಡಿ ಇಸ್ರೇಲ್ ಕೃಷಿ ತಂತ್ರಜ್ಞಾನ ಕುರಿತು ಚರ್ಚಿಸಿದರು.

ವಿಕಾಸಸೌಧದ ಕೃಷಿ ಸಚಿವರ ಕಚೇರಿಯಲ್ಲಿ ಭೇಟಿ ಮಾಡಿದ ಇಸ್ರೇಲ್ ಪ್ರತಿನಿಧಿಗಳು, ಕೃಷಿ ಕ್ಷೇತ್ರದಲ್ಲಿ ಇಸ್ರೇಲ್ ಮತ್ತು ಕರ್ನಾಟಕದ ನಡುವೆ ನಡೆಯುತ್ತಿರುವ ಸಹಭಾಗಿತ್ವ ಮತ್ತು ಮುಂದಿನ ದಾರಿ ಕುರಿತು ಮಹತ್ವದ ಚರ್ಚೆ ನಡೆಸಿದರು.

ಕೊಡಗಿನಲ್ಲಿ ಆಧುನಿಕ ಸೆನ್ಸಾರ್ ಸೂಕ್ಷ್ಮ ನೀರಾವರಿ ಪದ್ಧತಿಯನ್ನು ಈಗಾಗಲೇ ಇಸ್ರೇಲ್ ಸಹಭಾಗಿತ್ವದಲ್ಲಿ ಕಾಫಿ ಬೆಳೆಯಲ್ಲಿ ಅಳವಡಿಸಲಾಗುತ್ತಿದ್ದು, ಇದನ್ನು ರಾಜ್ಯದ ಬೇರೆ ಜಿಲ್ಲೆಗಳ ಕೃಷಿಗಳಲ್ಲಿ ಇಸ್ರೇಲ್ ಆಧುನಿಕ ಸೆನ್ಸಾರ್ ಸೂಕ್ಷ್ಮ ನೀರಾವರಿ ತಂತ್ರಜ್ಞಾನವನ್ನು ಅಳವಡಿಸುವ ಬಗ್ಗೆ ಹಾಗೂ ಕರ್ನಾಟಕದಲ್ಲಿ ಇದಕ್ಕೆ ಉತ್ತೇಜನ ನೀಡಬೇಕೆಂದು  ಮನವಿ ಮಾಡಿದರು. ಅಲ್ಲದೇ ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳು ಹಾಗೂ ಇಸ್ರೇಲ್ನ ಟೆಲಿವಿವಾ ವಿಶ್ವವಿದ್ಯಾಲಯ , ಮಾಶೋಮ್ ತರಬೇತಿ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವ ಕುರಿತು ಸಚಿವರ ಜೊತೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕದಲ್ಲಿ ರೈತರನ್ನು ರೈತೋದ್ಯಮಿಗಳನ್ನಾಗಿಸಲು ಕೃಷಿ ನವೋದ್ಯಮಕ್ಕೆ ಇಲಾಖೆ ಹಾಗೂ ಕೃಷಿ ಸಚಿವರು ಉತ್ತೇಜನ ನೀಡುತ್ತಿರುವುದಕ್ಕೆ ಇಸ್ರೇಲ್ ಪ್ರತಿನಿಧಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. 

ಬಿ.ಸಿ.ಪಾಟೀಲ್ ಮಾತನಾಡಿ, ಕೋಲಾರದಲ್ಲಿ ಅತ್ಯಂತ ಕಡಿಮೆ ನೀರಿನಲ್ಲಿಯೇ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡು ಇಡೀ ರಾಜ್ಯಕ್ಕೆ ಕೋಲಾರದ ರೈತರು ಮಾದರಿಯಾಗಿದ್ದಾರೆ. ರಾಜ್ಯದಲ್ಲಿ ಕೋಲಾರ ಸಮಗ್ರ ಕೃಷಿ ಪದ್ಧತಿಯಡಿಯಲ್ಲಿಯೇ ಇಸ್ರೇಲ್ ತಂತ್ರಜ್ಞಾನವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಳ್ಳುವ ಬಗ್ಗೆ ಇಸ್ರೇಲ್ ಪ್ರತಿನಿಧಿಗಳ ಜೊತೆ ಮಾಹಿತಿ ಹಂಚಿಕೊಂಡರು. ಸಹಭಾಗಿತ್ವ ಹಾಗೂ ಮುಂದಿನ ಹೆಜ್ಜೆ ಕುರಿತು ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳುವುದಾಗಿ ಹೇಳಿದರು.

ಭೇಟಿ ವೇಳೆ ಕೃಷಿ ಸಚಿವರ  ಆಪ್ತ ಕಾರ್ಯದರ್ಶಿ ಸಿ.ಎಲ್.ಶಿವಕುಮಾರ್, ವಿಶೇಷ ಕರ್ತವ್ಯಾಧಿಕಾರಿಗಳಾದ ಎ.ಬಿ.ಪಾಟೀಲ್ ಹಾಗೂ ಮಂಜು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ತಾಜಾ ಸುದ್ದಿ, ಮಾಹಿತಿಗಾಗಿ Harithalekhaniಯನ್ನು Facebook / Twitterಗಳಲ್ಲಿ ಫಾಲೋ ಮಾಡಿ.

ರಾಜಕೀಯ

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ ಕುಸಿದಿದೆ. ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಕೇಂದ್ರ

[ccc_my_favorite_select_button post_id="121597"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]