ದೊಡ್ಡಬಳ್ಳಾಪುರ: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕರ್ನಾಟಕ ಬಂದ್ ಕರೆ ಹಿನ್ನೆಲೆಯಲ್ಲಿ ನಗರದ ಹಳೇ ಬಸ್ ನಿಲ್ದಾಣದಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ಆರಂಭಿಸಲಾಗಿದೆ.
ಪ್ರಸ್ತುತ ನಗರದಾದ್ಯಂತ ಸ್ವಯಂ ಪ್ರೇರಿತವಾಗಿ ಬಂದ್ ಗೆ ಬೆಂಬಲ ನೀಡಿರುವುದು ಕಂಡುಬರುತ್ತಿದೆ. ಟಿಬಿ ಸರ್ಕಲ್, ಡಿಕ್ರಾಸ್, ಬಸವ ಭವನ, ಮಾರುಕಟ್ಟೆ, ಬಸ್ ನಿಲ್ದಾಣದಲ್ಲಿ ಅಂಗಡಿ ಮುಗಟ್ಟುಗಳು ಮುಚ್ಚಿವೆ.
ಎಪಿಎಂಸಿ ಮಾರುಕಟ್ಟೆಯ ವ್ಯಾಪಾರ ವಹಿವಾಟಿನ ಮೇಲೆ ಬಂದ್ ಬಿಸಿ ಯಾವುದೇ ಪರಿಣಾಮ ತಟ್ಟದೆ ವಹಿವಾಟು ಯಥಾಸ್ಥಿತಿಯಲ್ಲಿ ನಡೆಯುತ್ತಿದೆ.
ಕೆಎಸ್ಆರ್ಟಿಸಿ ಬಸ್ ಸಂಚಾರ ಯಥಾ ಸ್ಥಿತಿಯಲಿದ್ದು, ವಾಹನ ಸಂಚಾರ ವಿರಳವಾಗಿದೆ.
ಡಿವೈಎಸ್ಪಿ ಟಿ.ರಂಗಪ್ಪ ಸ್ಥಳದಲ್ಲಿಯೇ ಇದ್ದು, ಬಂದೂ ಬಸ್ತ್ ಕೈಗೊಂಡಿದ್ದಾರೆ.
ಕ್ಷಣ ಕ್ಷಣದ ತಾಜಾ ಸುದ್ದಿ, ಮಾಹಿತಿಗಾಗಿ Harithalekhaniಯನ್ನು Facebook / Twitterಗಳಲ್ಲಿ ಫಾಲೋ ಮಾಡಿ.

