ಆಹಾರ ಸಂಸ್ಕರಣ ಉದ್ದಿಮೆ,ಸ್ಪರ್ಧಾಕತೆ ಹೆಚ್ಚಿಸುವ ನಿಟ್ಟಿನಲ್ಲಿ ರೈತರಿಗೆ ಒಂದು ಜಿಲ್ಲೆ ಒಂದು ಉತ್ಪನ್ನಕ್ಕಾಗಿ ತರಬೇತಿ: ಬಿ.ಸಿ.ಪಾಟೀಲ್

ಬೆಂಗಳೂರು: ಅಸಂಘಟಿತ ವಲಯದಲ್ಲಿರುವ ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು, ಅವುಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರೈತರಿಗೆ ಒಂದು ಜಿಲ್ಲೆ ಒಂದು ಉತ್ಪನ್ನ(ಬೆಳೆ)ತರಬೇತಿಯನ್ನು ನೀಡಲು ಕೃಷಿ ಸಚಿವ ಬಿ.ಸಿ.ಪಾಟೀಲ್ ನಿರ್ಧರಿಸಿದ್ದಾರೆ.

ಆತ್ಮ ನಿರ್ಭರ್ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಉದ್ದಿಮೆಗಳ ಮಂತ್ರಾಲಯವು ಪ್ರಧಾನ ಮಂತ್ರಿ ಸಣ್ಣ ಆಹಾರ ಸಂಸ್ಕರಣಾ ಉದ್ಯಮಗಳ ಕ್ರಮಬದ್ಧಗೊಳಿಸುವಿಕೆ ಯೋಜನೆಯನ್ನು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲು ಉದ್ದೇಶಿಸಿದ್ದು, ಅಸಂಘಟಿತ ವಲಯದಲ್ಲಿರುವ ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿಎಫ್ ಟಿಆರ್ಐ (ಕೌನ್ಸಿಲ್ ಆಫ್ ಸೈಂಟಿಫಿಕ್ & ಇಂಡಸ್ಟ್ರಿಯಲ್ ರಿಸರ್ಚ್. ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ, ಸರ್ಕಾರ. ಆಫ್ ಇಂಡಿಯಾ, ಮೈಸೂರು) ಮೈಸೂರಿನಲ್ಲಿ ರೈತರಿಗೆ ತರಬೇತಿ ನೀಡುವ ಬಗ್ಗೆ ಕೃಷಿ ಸಚಿವ ಬಿ.ಸಿ.ಪಾಟೀಲ್, ವಿಕಾಸಸೌಧದ ಕಚೇರಿಯಲ್ಲಿ ಸಿಎಫ್ ಟಿಆರ್ಐ ಮುಖ್ಯಸ್ಥರು ಹಾಗೂ ವಿಜ್ಞಾನಿಗಳೊಂದಿಗೆ ಮಹತ್ವದ ಸಭೆ ನಡೆಸಿ ಚರ್ಚಿಸಿದರು.

ಅಂದ್ಹಾಗೆ ಜನವರಿ 11 ರಿಂದ ಮಾರ್ಚ್ 30 ರವರೆಗೆ ತರಬೇತಿ ನಡೆಸಲು ಉದ್ದೇಶಿಸಲಾಗಿದ್ದು, ಕೃಷಿ ಇಲಾಖೆಯ ಕೆಪೆಕ್ (ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ)50 ಮಂದಿಯಂತೆ ಪ್ರತಿ ತಾಲೂಕಿನಿಂದ 2 ರೈತರನ್ನು ಆಯ್ಕೆಮಾಡಿ ಒಂದು ಗುಂಪು ರಚಿಸಿ ಒಟ್ಟು 500 ಜನರಿಗೆ ತರಬೇತಿ ನೀಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದ್ದು, 6 ದಿನ ನಡೆಯುವ ಈ ತರಬೇತಿಯಲ್ಲಿ ಕೊನೆಯ 2 ದಿನಗಳನ್ನು ಮಾರ್ಕೆಟಿಂಗ್, ಬ್ರಾಂಡ್ ಗಾಗಿ ಹೆಚ್ಚಿನ ಒತ್ತು ನೀಡಲು ಕೃಷಿ ಸಚಿವರು ಸಲಹೆ ನೀಡಿದರು. ವಿಶೇಷವಾಗಿ ಮೆಕ್ಕೆಜೋಳ, ತೊಗರಿ ಹಾಗೂ ಸಿರಿಧಾನ್ಯಗಳ ಉತ್ಪನ್ನಗಳಿಗೆ ಹೆಚ್ಚಿನ ಆದ್ಯತೆ ನೀಡುವ ಬಗ್ಗೆಯೂ ಬಿ.ಸಿ.ಪಾಟೀಲ್ ಸಭೆಯಲ್ಲಿ ಚರ್ಚಿಸಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಬಿ.ಸಿ.ಪಾಟೀಲ್,  ಅಸಂಘಟಿತ ವಲಯದಲ್ಲಿರುವ ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು, ಅವುಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವುದು ಮತ್ತು ಅವುಗಳನ್ನು ಸಂಘಟಿತ ವಲಯಕ್ಕೆ ತರುವುದು ಹಾಗೂ ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಸಂಘಗಳು ಹಾಗೂ ಉತ್ಪಾದಕ ಸಹಕಾರಿ ಸಂಘಗಳಿಗೆ ಉತ್ತೇಜನ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಒಂದು ಜಿಲ್ಲೆ, ಒಂದು ಉತ್ಪನ್ನ ಅಥವಾ ಬೆಳೆಯನ್ನು ಪ್ರೋತ್ಸಾಹಿಸುವುದು ಆಗಿರುತ್ತದೆ. ಕೃಷಿ ಇಲಾಖೆ ಹಾಗೂ ಕೃಷಿ ಸಂಬಂಧಿತ ಇಲಾಖೆಗಳು ಒಂದು ಜಿಲ್ಲೆ ಒಂದು ಉತ್ಪನ್ನ(ಬೆಳೆ)ಯೋಜನೆಯಡಿ ಉತ್ಪನ್ನಗಳನ್ನು ಗುರುತಿಸಿ, ಈ ಉತ್ಪನ್ನದ ಮೌಲ್ಯವರ್ಧನೆ, ಸಂಸ್ಕರಣೆ, ಪ್ಯಾಕಿಂಗ್, ಬ್ರಾಂಡ್ ಅಭಿವೃದ್ಧಿ, ಮಾರುಕಟ್ಟೆಗೆ ಪ್ರೋತ್ಸಾಹಿಸಲು ತರಬೇತಿ ನೀಡುತ್ತಿರುವುದಾಗಿ ಮಾಹಿತಿ ನೀಡಿದರು.

ಸಭೆಯಲ್ಲಿ ಸಿಎಫ್ ಟಿಆರ್ಐ ನಿರ್ದೇಶಕ ಜಿತೇಂದ್ರ ಜಾಧವ್, ಮುಖ್ಯಸ್ಥ ಡಾ|ಉಮೇಶ್ ಹೆಬ್ಬಾರ್, ಕೃಷಿ ಇಲಾಖೆ ವಿಶೇಷ ಕರ್ತವ್ಯಾಧಿಕಾರಿ ಮಂಜು ಸೇರಿದಂತೆ  ವಿಜ್ಞಾನಿಗಳು ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿಯ ಫೇಸ್ಬುಕ್ ಪುಟ ಹಾಗೂ ಟ್ವಿಟರ್ನಲ್ಲಿ ಫಾಲೋ ಮಾಡಿ.

ರಾಜಕೀಯ

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ ಕುಸಿದಿದೆ. ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಕೇಂದ್ರ

[ccc_my_favorite_select_button post_id="121597"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]