ದೊಡ್ಡಬಳ್ಳಾಪುರ: ಮದ್ಯ ಕೊಳ್ಳುವ ನೆಪದಲ್ಲಿ ಬಂದ ದುಷ್ಕರ್ಮಿಗಳು, ನಗರದ ಬಸ್ ನಿಲ್ದಾಣದ ಬಳಿ ಇರುವ ವೈನ್ಸ್ ನಲ್ಲಿನ ಕ್ಯಾಶಿಯರ್ ಮೇಲೆ ಹಲ್ಲೆ ನಡೆಸಿ ಹಣದ ಚೀಲವನ್ನು ಕಿತ್ತು ಕೊಂಡು ಪರಾರಿಯಾಗಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಹಳೆ ಬಸ್ ನಿಲ್ದಾಣದಲ್ಲಿರುವ ಮಧುಶ್ರೀ ವೈನ್ಸ್ ನಲ್ಲಿ ಘಟನೆ ನಡೆದಿದ್ದು, ಕ್ಯಾಶಿಯರ್ ರಂಗಯ್ಯ ಹಾಗೂ ಕೆಲಸಗಾರ ಅಭಿಷೇಕ್. ವೈನ್ಸ್ ಬಾಗಿಲು ಮುಚ್ಚುವ ವೇಳೆ ಮದ್ಯ ಖರೀದಿಸುವ ನೆಪದಲ್ಲಿ ಎರಡು ದ್ವಿಚಕ್ರ ವಾಹನದಲ್ಲಿ ಬಂದ ನಾಲ್ಕು ಮಂದಿ ದುಷ್ಕರ್ಮಿಗಳು. ಇವರ ಮೇಲೆ ಹಲ್ಲೆ ನಡೆಸಿ, ಕಣ್ಣಿಗೆ ಸ್ಪ್ರೇ ಒಡೆದು ಕ್ಯಾಶಿಯರ್ ರಂಗಯ್ಯನ ಕೈಲಿದ್ದ ಸುಮಾರು ಒಂದು ಲಕ್ಷ ನಗದು, ಎಟಿಎಂ, ಆಧಾರ್ ಕಾರ್ಡ್ ಇದ್ದ ಹಣದ ಚೀಲ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಸರ್ಕಲ್ ಇನ್ಸ್ಪೆಕ್ಟರ್ ನವೀನ್ ಕುಮಾರ್ ಹರಿತಲೇಖನಿಗೆ ತಿಳಿಸಿದ್ದಾರೆ.
ಸ್ಥಳಕ್ಕೆ ಅಡಿಷನಲ್ ಎಸ್ಪಿ ಲಕ್ಷ್ಮೀಗಣೇಶ್, ಡಿವೈಎಸ್ಪಿ ಟಿ.ರಂಗಪ್ಪ, ಸರ್ಕಲ್ ಇನ್ಸ್ಪೆಕ್ಟರ್ ನವೀನ್ ಕುಮಾರ್ ಹಾಗೂ ಸಬ್ ಇನ್ಸ್ಪೆಕ್ಟರ್ ಸೋಮಶೇಖರ್ ಸ್ಥಳ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿಯ ಫೇಸ್ಬುಕ್ ಪುಟ ಹಾಗೂ ಟ್ವಿಟರ್ನಲ್ಲಿ ಫಾಲೋ ಮಾಡಿ.

