ಸಿಡ್ನಿ: ಏಕದಿನ ಸರಣಿ ಸೋಲಿನ ಸೇಡನ್ನು ಟೀಂ ಇಂಡಿಯಾ ತೀರಿಸಿಕೊಂಡಿದೆ. ಸಿಡ್ನಿಯಲ್ಲಿ ನಡೆದ 2ನೇ ಟಿ20 ಪಂದ್ಯ ಗೆಲ್ಲುವ ಮೂಲಕ ಟೀಂ ಇಂಡಿಯಾ ಟಿ20 ಸರಣಿ ತನ್ನದಾಗಿಸಿಕೊಂಡಿದೆ.
ಸಿಡ್ನಿ ಮೈದಾನದಲ್ಲಿ 195 ರನ್ ಟಾರ್ಗೆಟ್ ಚೇಸ್ ಮಾಡಿದ ಭಾರತದ ಪರ ಕೆ.ಎಲ್.ರಾಹುಲ್ ಹಾಗೂ ಶಿಖರ್ ಧವನ್ ಉತ್ತಮ ಆರಂಭ ಒದಗಿಸಿದರು.
ರಾಹುಲ್ 22 ಎಸೆತದಲ್ಲಿ 30 ರನ್ ಸಿಡಿಸಿ ಔಟಾದ ನಂತರ. ಶಿಖರ್ ಧವನ್ ಹಾಗೂ ನಾಯಕ ವಿರಾಟ್ ಕೊಹ್ಲಿ ಜೊತೆಯಾಟದಿಂದ ಟೀಂ ಇಂಡಿಯಾ ಮತ್ತೆ ಹೋರಾಟ ಮುಂದುರಿಸಿತು. ಶಿಖರ್ ಧವನ್ 36 ಎಸೆತದಲ್ಲಿ 52 ರನ್ ಸಿಡಿಸಿ ಔಟಾದರೆ. ಬ್ಯಾಟಿಂಗ್ ಆರ್ಡರ್‌ನಲ್ಲಿ ಬಡ್ತಿ ಪಡೆದು ಬಂದ ಸಂಜು ಸಾಮ್ಸನ್ 15 ರನ್ ಸಿಡಿಸಿ ಪೆವಿಲಿಯನ್ ಸೇರಿಕೊಂಡರು.
ವಿರಾಟ್ ಕೊಹ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರಾದರು, 24 ಎಸೆದಲ್ಲಿ 40 ರನ್ ಸಿಡಿಸಿ ಔಟಾದರು.
ಕೊನೆಯಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ಶ್ರೇಯಸ್ ಅಯ್ಯರ್ ಆಸರೆಯಾದರು. ಅಂತಿಮ 12 ಎಸೆತದಲ್ಲಿ ಟೀಂ ಇಂಡಿಯಾ ಗೆಲುವಿಗೆ 25 ರನ್ ಅವಶ್ಯಕತೆ ಸಂಧರ್ಭದಲ್ಲಿ, ಪಾಂಡ್ಯ ಹಾಗೂ ಅಯ್ಯರ್ ಹೋರಾಟ ಸ್ಫೋಟಕ ಆಟವಾಡಿದರು. ಸತತ 2 ಭರ್ಜರಿ ಸಿಕ್ಸರ್ ಸಿಡಿಸಿದ ಹಾರ್ದಿಕ್ ಪಾಂಡ್ಯ ಇನ್ನು 2 ಎಸೆತ ಬಾಕಿ ಇರುವಂತೆ ಟೀ ಇಂಡಿಯಾಗೆ 6 ವಿಕೆಟ್ ಗೆಲುವು ತಂದುಕೊಟ್ಟರು. ಪಾಂಡ್ಯ 22 ಎಸೆತದಲ್ಲಿ ಅಜೇಯ 42 ರನ್ ಸಿಡಡಿಸಿದರೆ, ಅಯ್ಯರ್ ಅಜೇಯ 12 ರನ್ ಸಿಡಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿಯ ಫೇಸ್ಬುಕ್ ಪುಟ ಹಾಗೂ ಟ್ವಿಟರ್ನಲ್ಲಿ ಫಾಲೋ ಮಾಡಿ.

