ದೊಡ್ಡಬಳ್ಳಾಪುರ: ನೂತನ ಕೃಷಿ ಕಾಯ್ದೆ ಹಿಂಪಡೆಯುವಂತೆ ನಾಳೆ (ಮಂಗಳವಾರ) ಕರೆನೀಡಿರುವ ಭಾರತ್ ಬಂದ್ ಹಿನ್ನೆಲೆ ದೊಡ್ಡಬಳ್ಳಾಪುರದಲ್ಲಿ ಯಾವುದೇ ರೀತಿಯ ಬಂದ್ ಇರುವುದಿಲ್ಲ. ಇದಕ್ಕೆ ಬದಲಾಗಿ ಪ್ರತಿಭಟನೆ ನಡೆಸಲು ಸಂಘಟನೆಗಳು ತೀರ್ಮಾನಿಸಿವೆ.
ಕೇಂದ್ರದ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ರೈತರು ಡಿ.8ರಂದು (ಮಂಗಳವಾರ) ಕರೆ ನೀಡಿರುವ ಭಾರತ್ ಬಂದ್ಗೆ ಕುರಿತಂತೆ ನಗರದ ಕನ್ನಡ ಜಾಗೃತ ಭವನದಲ್ಲಿ ನಡೆದ ವಿವಿಧ ಸಂಘಟನೆಗಳ ಮುಖಂಡರ ಸಭೆಯಲ್ಲಿ ಈ ಕುರಿತು ನಿರ್ಣಯಕ್ಕೆ ಬಂದಿದ್ದಾರೆ.
ಸಭೆಯ ನಿರ್ಣಯದ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಸಂಘಟನೆಗಳ ಮುಖಂಡರು, ಕರ್ನಾಟಕ ಬಂದ್ ನ್ನು ದೊಡ್ಡಬಳ್ಳಾಪುರದಲ್ಲಿ ಯಶಸ್ವಿಯಾಗಿ ಮಾಡಿರುವ ಕಾರಣ, ಮತ್ತೆ ತಾಲೂಕಿನಲ್ಲಿ ಬಂದ್ ಮಾಡುವುದು ಬೇಡ. ಇದಕ್ಕೆ ಬದಲಾಗಿ ಸಿದ್ದಲಿಂಗಯ್ಯ ವೃತ್ತದಿಂದ ತಾಲೂಕು ಕಚೇರಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಭಾರತ್ ಬಂದ್ಗೆ ಬೆಂಬಲ ನೀಡಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.
ಸಭೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ / ಜಾಹಿರಾತಿಗಾಗಿ 7019780535 ಸಂಖ್ಯೆಗೆ ಸಂಪರ್ಕಿಸಿ

