ಗ್ರಾ.ಪಂ. ಚುನಾವಣೆ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರರಿಂದ ಮಹತ್ವದ ಮಾಹಿತಿ

ಬೆಂಗಳೂರು: ರಾಜ್ಯ ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 92 ಗ್ರಾಮ ಪಂಚಾಯಿತಿಗಳಿಗೆ ಚುನಾವಣಾ ವೇಳಾ ಪಟ್ಟಿ ಪ್ರಕಟಿಸಿದ್ದು, ಕೋವಿಡ್-19ರ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳ ಚುನಾವಣೆ ಎರಡು ಹಂತಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್.ರವೀಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೊದಲ ಹಂತದ ಚುನಾವಣೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ 26 ಗ್ರಾಮ ಪಂಚಾಯಿತಿಗಳು ಹಾಗೂ ನೆಲಮಂಗಲ ತಾಲ್ಲೂಕಿನ 21 ಗ್ರಾಮ ಪಂಚಾಯಿತಿಗಳಲ್ಲಿ ನಡೆಯಲಿದೆ. 2020ರ ಡಿಸೆಂಬರ್ 07 ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನವಾಗಿದ್ದು, ಡಿಸೆಂಬರ್ 11 ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ಡಿಸೆಂಬರ್ 12 ರಂದು ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದ್ದು, ಡಿಸೆಂಬರ್ 14 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ, ಡಿಸೆಂಬರ್ 22 ರಂದು ಬೆಳಿಗ್ಗೆ 7.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅಗತ್ಯ ಇದ್ದಲ್ಲಿ ಡಿಸೆಂಬರ್ 24 ರಂದು ಮತದಾನ ನಡೆಯಲಿದೆ. ಡಿಸೆಂಬರ್ 30 ರಂದು ಬೆಳಿಗ್ಗೆ 8.00 ಗಂಟೆಯಿಂದ ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಡಿಸೆಂಬರ್ 31 ರಂದು ಚುನಾವಣಾ ಮಾದರಿ ನೀತಿ ಸಂಹಿತೆ ಮುಕ್ತಾಯಗೊಳ್ಳಲಿದೆ.

ಎರಡನೇ ಹಂತದ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳು ಹಾಗೂ ದೇವನಹಳ್ಳಿ ತಾಲ್ಲೂಕಿನ 20 ಗ್ರಾಮ ಪಂಚಾಯಿತಿಗಳಲ್ಲಿ ನಡೆಯಲಿದೆ. 2020ರ ಡಿಸೆಂಬರ್ 11 ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನವಾಗಿದ್ದು, ಡಿಸೆಂಬರ್ 16 ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ಡಿಸೆಂಬರ್ 17 ರಂದು ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದ್ದು, ಡಿಸೆಂಬರ್ 19 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ, ಡಿಸೆಂಬರ್ 27 ರಂದು ಬೆಳಿಗ್ಗೆ 7.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅಗತ್ಯ ಇದ್ದಲ್ಲಿ ಡಿಸೆಂಬರ್ 29 ರಂದು ಮತದಾನ ನಡೆಯಲಿದೆ. ಡಿಸೆಂಬರ್ 30 ರಂದು ಬೆಳಿಗ್ಗೆ 8.00 ಗಂಟೆಯಿಂದ ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಡಿಸೆಂಬರ್ 31 ರಂದು ಚುನಾವಣಾ ಮಾದರಿ ನೀತಿ ಸಂಹಿತೆ ಮುಕ್ತಾಯಗೊಳ್ಳಲಿದೆ.

ಮೊದಲ ಹಂತದಲ್ಲಿ ಹೊಸಕೋಟೆ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಾದ ಇಟ್ಟಸಂದ್ರ, ನೆಲವಾಗಿಲು, ನಂದಗುಡಿ, ದೊಡ್ಡರಳಗೆರೆ, ಸೂಲಿಬೆಲೆ, ಗಿಡ್ಡಪ್ಪನಹಳ್ಳಿ, ಕಂಬಳೀಪುರ, ಶಿವನಾಪುರ, ಬೈಲನರಸಾಪುರ, ತಾವರೆಕೆರೆ, ಮುಗಬಾಳ, ದೊಡ್ಡಹುಲ್ಲೂರು ಲಕ್ಕೊಂಡಹಳ್ಳಿ, ಕುಂಬಳಹಳ್ಳಿ, ದೊಡ್ಡಗಟ್ಟಿಗನಬ್ಬೆ, ದೊಡ್ಡನಲ್ಲಾಳ, ಓರೋಹಳ್ಳಿ, ಜಡಿಗೇನಹಳ್ಳಿ, ವಾಗಟ, ಖಾಜಿಹೊಸಹಳ್ಳಿ, ದೇವನಗುಂದಿ, ಅನುಗೊಂಡನಹಳ್ಳಿ, ಗಣಗಲೂರು, ಕಲ್ಕುಂಟೆ, ಅಗ್ರಹಾರ, ಹೆತ್ತಕ್ಕಿ, ಚೊಕ್ಕಹಳ್ಳಿ ಸೇರಿದಂತೆ ಒಟ್ಟು 26 ಗ್ರಾಮ ಪಂಚಾಯಿತಿಗಳು ಹಾಗೂ ನೆಲಮಂಗಲ ತಾಲ್ಲೂಕಿನ ಗ್ರಾಮ ಪಂಚಾಯತಿಗಳಾದ ಸೋಲದೇವನಹಳ್ಳಿ, ಎಂಟಗಾನಹಳ್ಳಿ, ಶ್ರೀನಿವಾಸಪುರ, ಬೂದಿಹಾಳ್, ಟಿ.ಬೇಗೂರು, ಹಸಿರುವಳ್ಳಿ, ದೊಡ್ಡಬೆಲೆ, ಕೊಡಿಗೇಹಳ್ಳಿ, ತ್ಯಾಮಗೊಂಡ್ಲು, ಕಳಲುಘಟ್ಟ, ಮಣ್ಣೆ, ಮರಳಕುಂಟೆ, ನರಸೀಪುರ, ಅಗಳಕುಪ್ಪೆ, ಸೋಂಪುರ, ಹೊನ್ನೇನಹಳ್ಳಿ, ಶಿವಗಂಗೆ, ಅರೆಬೊಮ್ಮನಹಳ್ಳಿ, ಕುಲುವನಹಳ್ಳಿ, ಗೊಲ್ಲಹಳ್ಳಿ, ಕಣೇಗೌಡನಹಳ್ಳಿ ಸೇರಿದಂತೆ ಒಟ್ಟು 21 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಾದ ಕೊಡಿಗೇಹಳ್ಳಿ, ಕೆಸ್ತೂರು, ರಾಜಘಟ್ಟ, ಕೊನಘಟ್ಟ, ಕಂಟನಕುಂಟೆ, ತೂಬಗೆರೆ, ಹಾಡೋನಹಳ್ಳಿ, ಮೆಳೇಕೋಟೆ, ಹೆಗ್ಗಡಿಹಳ್ಳಿ, ಹಣಬೆ, ತಿಪ್ಪೂರು, ದೊಡ್ಡಬೆಳವಂಗಲ, ಹಾದ್ರಿಪುರ, ಸಕ್ಕರೆಗೊಲ್ಲಹಳ್ಳಿ, ಹುಲಿಕುಂಟೆ, ಸಾಸಲು, ಭಕ್ತರಹಳ್ಳಿ, ಆರೂಢಿ, ಹೊಸಹಳ್ಳಿ, ಚನ್ನಾದೇವಿ, ಅಗ್ರಹಾರ, ಕಾಡನೂರು, ಕನಸವಾಡಿ, ಹೊನ್ನಾವರ ದೊಡ್ಡತುಮಕೂರು, ಮೇಲಿನಜೂಗಾನಹಳ್ಳಿ ಸೇರಿದಂತೆ ಒಟ್ಟು 25 ಗ್ರಾಮ ಪಂಚಾಯಿತಿಗಳು ಹಾಗೂ ದೇವನಹಳ್ಳಿ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಾದ ಕುಂದಾಣ, ಜಾಲಿಗೆ, ಕನ್ನಮಂಗಲ, ವಿಶ್ವನಾಥಪುರ, ಕೊಯಿರಾ, ಕಾರಹಳ್ಳಿ, ಬಿದಲೂರು, ವೆಂಕಟಗಿರಿಕೋಟೆ, ಬಿಜ್ಜವಾರ, ಗೊಡ್ಲುಮುದ್ದೇನಹಳ್ಳಿ, ಆವತಿ, ಯಲಿಯೂರು, ಗಂಗವಾರಚೌಡಪ್ಪನಹಳ್ಳಿ, ಚನ್ನಹಳ್ಳಿ, ಬೆಟ್ಟಕೋಟೆ, ಬೂದಿಗೆರೆ, ಅಣ್ಣೇಶ್ವರ, ಆಲೂರುದುದ್ದನಹಳ್ಳಿ, ಮಂಡಿಬೆಲೆ, ಐಬಸಾಪುರ ಸೇರಿದಂತೆ ಒಟ್ಟು 20 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ.

ಗ್ರಾಮ ಪಂಚಾಯತಿಗಳಿಗೆ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ನಾಮಪತ್ರ ಸಂಬಂಧಿತ ಎಲ್ಲಾ ಪ್ರಕ್ರಿಯೆಗಳು ಆಯಾ ಗ್ರಾಮ ಪಂಚಾಯತಿ ಕಾರ್ಯಾಲಯ/ಕಚೇರಿಗಳಲ್ಲಿ ನಡೆಯಲಿವೆ. ಆ ಗ್ರಾಮ ಪಂಚಾಯತಿಗಳ ಕ್ಷೇತ್ರವಾರು ಹಾಗೂ ವರ್ಗವಾರು ಮೀಸಲಾತಿ ನಿಗದಿಪಡಿಸಿರುವ ಅಧಿಸೂಚನೆಯನ್ನು ಈಗಾಗಲೇ ಹೊರಡಿಸಿದ್ದು, ಸ್ಫರ್ಧಿಸಲು ಇಚ್ಚಿಸುವ ಅಭ್ಯರ್ಥಿಯು ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿ ನೋಂದಾಯಿಸಲ್ಪಟ್ಟ ವ್ಯಕ್ತಿಯಾಗಿರಬೇಕು ಹಾಗೂ ಕನಿಷ್ಠ 21 ವರ್ಷ ವಯೋಮಾನವನ್ನು ಪೂರೈಸಿರಬೇಕು.

ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2020ರ ನವೆಂಬರ್ 30 ರಿಂದ ಡಿಸೆಂಬರ್ 31 ರ ಸಂಜೆ 5-00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ಚುನಾವಣೆಯು ಪಕ್ಷರಹಿತ ಚುನಾವಣೆ ಆಗಿರುವುದರಿಂದ ಸದಾಚಾರ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವುದು.

ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪೂರ್ಣ ಪ್ರದೇಶವನ್ನು ಪಟ್ಟಣ ಪಂಚಾಯತಿಯನ್ನಾಗಿ ಮೇಲ್ದರ್ಜೆಗೇರಿಸಲು ಉದ್ದೇಶಿಸಿ, ಸರ್ಕಾರವು (ನಗರಾಭಿವೃದ್ಧಿ ಇಲಾಖೆಯು) ಪ್ರಾಥಮಿಕ ಅಧಿಸೂಚನೆಯನ್ನು ಹೊರಡಿಸಿರುವ ಹಿನ್ನೆಲೆಯಲ್ಲಿ, ರಾಜ್ಯ ಚುನಾವಣಾ ಆಯೋಗದ ದಿನಾಂಕ:04.12.2020ರ ಆದೇಶದಂತೆ ಸದರಿ ಗ್ರಾಮ ಪಂಚಾಯತಿಯನ್ನು ಪ್ರಸ್ತುತ ಚುನಾವಣಾ ಪ್ರಕ್ರಿಯೆಯಿಂದ ಕೈಬಿಡಲಾಗಿದೆ.

ಹೊಸಕೋಟೆ ತಾಲ್ಲೂಕಿನ ಸಮೇತನಹಳ್ಳಿ, ಮುತ್ಸಂದ್ರ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕಿನ ಮಜರಾಹೊಸಹಳ್ಳಿ, ಅರಳುಮಲ್ಲಿಗೆ, ದರ್ಗಾಜೋಗಿಹಳ್ಳಿ ಹಾಗೂ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ, ನಲ್ಲೂರು, ಹಾರೋಹಳ್ಳಿ, ಕೋರಮಂಗಲ ಗ್ರಾಮ ಪಂಚಾಯತಿಗಳ ಪ್ರಸ್ತುತ ಸದಸ್ಯರುಗಳ ಪದಾವಧಿಯು ಮುಕ್ತಾಯಗೊಂಡಿಲ್ಲ, ಆದ್ದರಿಂದ ಆ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಹಾಲಿ ಚುನಾವಣೆ ಇರುವುದಿಲ್ಲವೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್.ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ / ಜಾಹಿರಾತಿಗಾಗಿ 7019780535 ಸಂಖ್ಯೆಗೆ ಸಂಪರ್ಕಿಸಿ

ರಾಜಕೀಯ

ಮೋದಿ ಸರ್ಕಾರದ ಟೊಳ್ಳಾದ ವಿದೇಶಾಂಗ ನೀತಿಯಿಂದ ಗ್ಯಾಸ್ ಬೆಲೆ ಏರಿಕೆ: ಸಿಎಂ‌ ಸಿದ್ದರಾಮಯ್ಯ

ಮೋದಿ ಸರ್ಕಾರದ ಟೊಳ್ಳಾದ ವಿದೇಶಾಂಗ ನೀತಿಯಿಂದ ಗ್ಯಾಸ್ ಬೆಲೆ ಏರಿಕೆ: ಸಿಎಂ‌ ಸಿದ್ದರಾಮಯ್ಯ

ನಾವು ಎಲ್ಲಾ ಸಮಯದಲ್ಲೂ ಎಚ್ಚರಿಸಿದಂತೆ, ವಿಧಾನಸಭಾ ಚುನಾವಣೆಗಳು ಮುಗಿದ ಕ್ಷಣ, ನರೇಂದ್ರ ಮೋದಿ ಸರ್ಕಾರ ಮತ್ತೆ ಬೆಲೆಗಳನ್ನು ಹೆಚ್ಚಿಸಿದೆ. ಮೇ 1 ರಂದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ₹993 ರಷ್ಟು ಹೆಚ್ಚಿಸಲಾಗಿದೆ, ಚುನಾವಣಾ

[ccc_my_favorite_select_button post_id="121599"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]