ದೊಡ್ಡಬಳ್ಳಾಪುರ: ಮಂಡ್ಯ ಜಿಲ್ಲೆಯ ಹುರುಗಲುವಾಡಿ ಗ್ರಾಮದಲ್ಲಿ ನಡೆದ ಅಪ್ರಾಪ್ತ ದಲಿತ ಬಾಲಕಿ ಮೇಲೆ ನೆಡೆದ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಹಾಗೂ ಮತ್ತೆ ಇಂತಹ ಘಟನೆ ಯಾವ ಹೆಣ್ಣು ಮಕ್ಕಳ ಮೇಲೆ ಆಗದಂತೆ ಕಠಿಣ ಕಾನೂನು ಜಾರಿಗೋಳಿಸಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಹಿಂದು ಜಾಗರಣಾ ವೇದಿಕೆ ಪತ್ರ ಚಳುವಳಿ ನಡೆಸುತ್ತಿದೆ.
ದೊಡ್ಡಬಳ್ಳಾಪುರ ನಗರ ಹಾಗೂ ಗ್ರಾಮಾಂತರ ಪ್ರದೇಶಗಳ ಹಳ್ಳಿಗಳಲ್ಲಿ ಪತ್ರ ಚಳುವಳಿಗೆ ಬೆಂಬಲಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದ್ದು, ಪತ್ರ ಚಳುವಳಿಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
ಈ ವೇಳೆ ಹಿಂಜಾವೇ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೊಡ್ಡತುಮಕೂರು ಆನಂದ್, ಸದಸ್ಯರಾದ ಘಾಟಿ ಚಿನ್ನಿ, ವಾಸು, ಸಂತೋಷ್ ನಾಯ್ಕ್, ವಕೀಲರಾದ ಚಂದ್ರ, ನರಸಿಂಹ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ / ಜಾಹಿರಾತಿಗಾಗಿ 7019780535 ಸಂಖ್ಯೆಗೆ ಸಂಪರ್ಕಿಸಿ

