ಸೂಕ್ತ ತರಬೇತಿಯೊಂದಿಗೆ ಉದ್ಯೋಗ ಅವಕಾಶ ಕಲ್ಪಿಸಿ: ಪಿ.ಎನ್.ರವೀಂದ್ರ

ಬೆಂಗಳೂರು: ಜಿಲ್ಲೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳನ್ನು ಹೆಚ್ಚಾಗಿ ಆಯೋಜಿಸಿ, ಯುವಕರು ಮತ್ತು ನಿರುದ್ಯೋಗಿಗಳನ್ನು ಗುರುತಿಸಿ, ಸೂಕ್ತ ತರಬೇತಿಯೊಂದಿಗೆ ಉದ್ಯೋಗ ಅವಕಾಶ ಕಲ್ಪಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ನಡೆದ “ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆ 3.0 ಅನುಷ್ಠಾನ, ಜಿಲ್ಲಾ ಕೌಶಲ್ಯ ಸಮಿತಿ ಹಾಗೂ ಉಪ ಸಮಿತಿಗಳನ್ನು ರಚಿಸುವ ಕುರಿತಾದ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ತರಬೇತಿ ಪಡೆದವರಿಗೆ ಸ್ಥಳೀಯ ಕಾರ್ಖಾನೆಗಳಲ್ಲಿ ಕೆಲಸ ನಿರ್ವಹಿಸುವ ಸಲುವಾಗಿ ಪ್ರಮಾಣ ಪತ್ರಗಳನ್ನು ನೀಡುವುದರ ಜೊತೆಗೆ ಸಮಾಜದ ಮುಖ್ಯವಾಹಿನಿಗೆ ಕರೆತರಲು ಪ್ರಯತ್ನಿಸಬೇಕು ಎಂದರಲ್ಲದೆ, ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳನ್ನು ಗುರುತಿಸಿ, ಅವರ ಆಸಕ್ತಿಯ ವಿಷಯದ ಅನ್ವಯ ಕೌಶಲ್ಯವನ್ನು ಅಭಿವೃದ್ಧಿಗೊಳಿಸುವಂತಹ ತರಬೇತಿ ನೀಡುವುದರ ಜೊತೆಗೆ, ಸೂಕ್ತ ಸ್ಥಳದಲ್ಲಿ ಉದ್ಯೋಗ ದೊರಕಿಸಬೇಕು ಎಂದು ಸೂಚಿಸಿದರು.

ಕಾಲೇಜುಗಳಿಗೆ ತೆರಳಿ ಯುವಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸಿ ಎಂದರು. ಅಲ್ಲದೆ, ಗ್ರಾಮ ಪಂಚಾಯಿತಿ ಹಂತದಲ್ಲಿ ಅಧಿಕಾರಿಗಳು ನಿರುದ್ಯೋಗಿಗಳಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿ ಕುಮಾರ್ ಮಾತನಾಡಿ, ಜಿಲ್ಲಾ ವ್ಯಾಪ್ತಿಯಲ್ಲಿನ ವೃತ್ತಿಪರ ಕಾಲೇಜುಗಳಿಗೆ ತೆರಳಿ ವಿದ್ಯಾರ್ಥಿಗಳಲ್ಲಿ ಕೌಶಲ್ಯವನ್ನು ಹೆಚ್ಚಿಸುವ ಕಾರ್ಯ ಮಾಡುವುದರ ಜೊತೆಗೆ ಸಬಲರನ್ನಾಗಿಸಬೇಕು ಎಂದರಲ್ಲದೆ, ಇಂತಹ ಕಾರ್ಯಕ್ರಮಗಳಿಗೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿಯಿಂದ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಲಕ್ಷ್ಮೀನಾರಾಯಣ ರಾಜು ಮಾತನಾಡಿ, ಜಿಲ್ಲೆಯಲ್ಲಿ ಕೈಗೊಂಡಿರುವ ತರಬೇತಿ ಕಾರ್ಯಗಳು, ಸಮಿತಿ ಮತ್ತು ಉಪಸಮಿತಿಗಳ ರಚನೆಯಲ್ಲಾಗಿರುವ ಪ್ರಗತಿ ಕುರಿತು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾ ಕೌಶಲ್ಯ ಅಭಿವೃದ್ಧಿ ಸಂಯೋಜಕ ಮಹಾಂತ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ / ಜಾಹಿರಾತಿಗಾಗಿ 7019780535 ಸಂಖ್ಯೆಗೆ ಸಂಪರ್ಕಿಸಿ

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]