ಭೂಸುಧಾರಣಾ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಜೆಡಿಎಸ್‌ ರೈತರ ಹಿತ ಕಾಯುವಂತ ಕೆಲಸ ಮಾಡಿದೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ವಿರೋಧಕ್ಕೆ ಮಾತ್ರ ವಿರೋಧ ಪಕ್ಷವಲ್ಲ. ತನ್ನ ಜವಾಬ್ದಾರಿಗಳನ್ನು ಅದು ರಚನಾತ್ಮಕವಾಗಿ ನಿರ್ವಹಿಸಬೇಕು. ಭೂಸುಧಾರಣಾ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಜೆಡಿಎಸ್‌ ರೈತರ ಹಿತ ಕಾಯುವಂತ ಕೆಲಸ ಮಾಡಿದೆ ಎಂದು ಮಾಜಿಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಭೂಸುಧಾರಣಾ ತಿದ್ದುಪಡಿ ಕಾಯ್ದೆ ವಿಚಾರವಾಗಿ ಟ್ವಿಟ್ ಮಾಡಿರುವ ಅವರು, ನ್ಯಾಯ ಕಾಂಗ್ರೆಸ್‌ ಕಡೆಯೂ ಇರಲಿಲ್ಲ, ಬಿಜೆಪಿ ಕೆಡೆಯೂ ಇರಲಿಲ್ಲ. ಕಾಯ್ದೆ ಸಮತೋಲನಗೊಳ್ಳುವಂತೆ ಜೆಡಿಎಸ್‌ ಮಾಡಿದೆ.ಬಿಜೆಪಿ ಪ್ರಸ್ತಾಪಿಸಿದ ಭೂ ಸುಧಾರಣಾ ತಿದ್ದುಪಡಿ ಮಸೂದೆ, ಅದರಲ್ಲಿದ್ದ ಕೆಲ ಅಂಶಗಳನ್ನು ಜೆಡಿಎಸ್‌ ಆರಂಭದಲ್ಲಿ ವಿರೋಧಿಸಿತ್ತು. ಅದರಲ್ಲಿ ಏನೇನು ಬದಲಾವಣೆಗಳು ಆಗಬೇಕು ಎಂಬುದನ್ನು ಹೇಳಿತ್ತು. ಕಾಂಗ್ರೆಸ್‌ ಕೂಡ ಮಸೂದೆ ವಿರೋಧಿಸಿತ್ತಾದರೂ, ಏನು ಬದಲಾವಣೆ ಆಗಬೇಕು ಎಂಬುದನ್ನು ಹೇಳಿರಲಿಲ್ಲ. ಅದು ವಿರೋಧಕ್ಕೆ ಮಾತ್ರ ಸೀಮಿತವಾಗಿತ್ತು. 

ಜೆಡಿಎಸ್‌ ಸೂಚಿಸಿದಂತೆ ಕಾಯ್ದೆಯಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದೆ. ಮೊದಲು ಪ್ರಸ್ತಾಪಿಸಿದ ಮಸೂದೆಯಲ್ಲಿ ಯಾವುದೇ ವ್ಯಕ್ತಿ ಗರಿಷ್ಠ 248 ಎಕರೆ ಜಮೀನು ಹೊಂದಲು ಅವಕಾಶವಿತ್ತು. ಆದರೆ, ಈಗ ಅದನ್ನು ತೆಗೆದು ಹಾಕಲಾಗಿದೆ. ಕಲಂ 80ರ ಅಡಿಯ ನೀರಾವರಿ ಜಮೀನನ್ನು ಕೃಷಿ ಉದ್ದೇಶಕ್ಕೆ ಮಾತ್ರವೇ ಬಳಸಬೇಕು ಎಂಬ ನಿಬಂಧನೆ ವಿಧಿಸಲಾಗಿದೆ. ಉಳುವವನೇ ಭೂಮಿ ಒಡೆಯ ಎಂಬ ತತ್ವದಲ್ಲಿ ಯಾವುದೇ ಬದಲಾವಣೆ ಮಾಡದಂತೆ ಸೂಚಿಸಲಾಗಿತ್ತು. ಅದನ್ನು ಹಾಗೆಯೇ ಉಳಿಸಿಕೊಳ್ಳಲಾಗಿದೆ. ಇದರಲ್ಲಿ ದೇವರಾಜ ಅರಸರ ಆಶಯವನ್ನು ಕಾಪಾಡಿಕೊಂಡಿದ್ದು ಜೆಡಿಎಸ್‌ನ ಹೆಗ್ಗಳಿಕೆಯಲ್ಲವೇ? ಎಸ್‌ಸಿ/ಎಸ್‌ಟಿ ಜನರ ಭೂಮಿ ವಿಚಾರದಲ್ಲಿ ಯಾವುದೇ ವಿನಾಯಿತಿಯೂ ನೀಡದಂತೆ ನೋಡಿಕೋಳ್ಳುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಕಾಯ್ದೆಯಲ್ಲಿನ 79(ಎ,ಬಿ) ಕಲಂಗಳ ಔಚಿತ್ಯದ ಬಗ್ಗೆ ಈ ವರೆಗೆ ಶಾಸನಸಭೆಗಳ ಒಳ, ಹೊರಗೆ ಸಾಕಷ್ಟು ಚರ್ಚೆಗಳಾಗಿವೆ. ಪ್ರೊ. ನಂಜುಂಡಸ್ವಾಮಿ ಅವರೇ, ‘ಇದು ಜನರ ಸ್ವಾತಂತ್ರ್ಯ ಹರಣ ಮಾಡುತ್ತದೆ’ ಎಂದು ಪ್ರತಿಪಾದಿಸಿದ್ದರು.

ಕೃಷಿ ಮಾಡುವ ಇಚ್ಛೆ ಇದ್ದೂ, ಕೃಷಿಕರಲ್ಲದಿದ್ದರೆ ಕೃಷಿ ಭೂಮಿ ಹೊಂದಂತೆ ಮಾಡುತ್ತಿದ್ದ ಈ ನಿಯಮವನ್ನು ತೆಗೆದುಹಾಕಲಾಗಿದೆ. 79(ಎ, ಬಿ) ಕಲಂ ಅಗತ್ಯತೆ, ಸಾಧಕ-ಬಾಧಕಗಳ ಪರಾಮರ್ಶೆಗೆ ಸಿದ್ದರಾಮಯ್ಯ ಅವರೂ ಸಿಎಂ ಆಗಿದ್ದಾಗ ಶ್ರೀನಿವಾಸ ಪ್ರಸಾದ್‌ರ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ ಮಾಡಿದ್ದರು. ಆದರೆ, ಈ ವಿಚಾರಗಳ ಬಗ್ಗೆ ಸಿದ್ದರಾಮಯ್ಯ ಅವರದ್ದು ಈಗ ದಿವ್ಯ ಮೌನ. ಈ ಕಲಂ ತೆಗೆದು ಹಾಕಿ ಕೃಷಿ ಮಾಡುವ ಮನಸ್ಸುಗಳಿಗೆ ಕೃಷಿ ಸಾಧ್ಯವಾಗಿಸುತ್ತಿರುವುದು ಜೆಡಿಎಸ್‌. 79(ಎ, ಬಿ) ಕಲಂಗೆ ಇತಿಶ್ರೀ ಹಾಡಿರುವುದು ನಮ್ಮ ಕೃಷಿ ವ್ಯಾಪ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಯುವಕರನ್ನು ಕೃಷಿಯತ್ತ ಆಕರ್ಷಿಸಲು ಸಹಾಯಕವಾಗುತ್ತದೆ. ಕೃಷಿಯಲ್ಲಿ ಹೊಸ ಪ್ರಯೋಗಗಳನ್ನು ಮಾಡಬಯಸುವವರಿಗೆ ಹಾದಿ ಸುಗಮವಾಗುತ್ತದೆ. ಸಾಂಪ್ರದಾಯಕ ಕೃಷಿಯ ಜಾಗಕ್ಕೆ ವೈಜ್ಞಾನಿಕ ಕೃಷಿ ಬರಲು ಅನುಕೂಲವಾಗುತ್ತದೆ. ಇದನ್ನು ಎಲ್ಲರೂ ಗಮನಿಸಬೇಕು.

ಭೂಸುಧಾರಣ ಕಾಯ್ದೆಯಲ್ಲಿ ನಿಜವಾದ ಸುಧಾರಣಾ ಕ್ರಮಗಳನ್ನು ಸಾಧಿಸಿದ್ದು ಜೆಡಿಎಸ್‌. ಆದರೂ ವಿಮರ್ಶೆ ಇಲ್ಲದೇ ಏಕಾಏಕಿ ಜೆಡಿಎಸ್‌ ಅನ್ನು ದೂರಲಾಗುತ್ತಿದೆ. 

ಜೆಡಿಎಸ್‌ನ ಮೇಲೆ ದಾಳಿ ಮಾಡುತ್ತಿರುವ ಕೆಲ ರೈತ ಮುಖಂಡರು ಒಂದು ಬಾರಿ ಪರಾಮರ್ಶೆ ಮಾಡಲಿ. ಜೆಡಿಎಸ್‌ ರೈತ ವಿರೋಧಿ ನಿಲುವು ತಳೆಯಲು ಎಂದಾದರೂ ಸಾಧ್ಯವೇ ಎಂದು ಪ್ರಶ್ನೆ ಮಾಡಿಕೊಳ್ಳಲಿ. ಮಿತಿಗಳು, ಭಿನ್ನಮತಗಳ ನಡುವೆಯೂ ರೈತರ 25 ಸಾವಿರ ಕೋಟಿಗೂ ಮಿಗಿಲಾದ ಸಾಲ ಮನ್ನಾ ಮಾಡಿದ್ದು ಇದೇ ಕುಮಾರಸ್ವಾಮಿಯೇ ಹೊರತು ಬೇರಾರೂ ಅಲ್ಲ. ಆಗ ನನ್ನನ್ನು ಯಾರೊಬ್ಬರೂ ಬೆನ್ನುತಟ್ಟಲಿಲ್ಲ, ರೈತರಿಗೆ ನೀಡಿದ ವಚನ ಪಾಲಿಸಿ, ಅಧಿಕಾರದಿಂದ ಹೊರ ನಡೆದಾಗ ನನ್ನ ಬೆಂಬಲಕ್ಕೆ ಯಾರೂ ಬರಲಿಲ್ಲ. ಈಗ ಸುಧಾರಣೆ ಕ್ರಮಗಳನ್ನು ಸಾಧಿಸಿದಾಗಲೂ ನಾನು ಏಕಾಂಗಿ. 

ನನ್ನನ್ನು ಟೀಕೆ ಮಾಡುತ್ತಿರುವ ಮನಸ್ಸುಗಳು ಒಮ್ಮೆ ನನ್ನ ರೈತ ಪರ ನಿಲುವುಗಳನ್ನು ಪರಾಮರ್ಶೆ ಮಾಡಲಿ, ಈ ವರೆಗಿನ ನನ್ನ ರೈತ ಪರ ಕಾರ್ಯಕ್ರಮಗಳನ್ನು ಅವಲೋಕಿಸಲಿ. ರೈತ ಕುಟುಂಬದಿಂದ ಬಂದ, ಮಣ್ಣಿನಿಂದ ಮೇಲೆದ್ದ ದೇವೇಗೌಡರ ಹಾದಿಯಲ್ಲಿ ನಡೆಯುತ್ತಿರುವ ನಾನು ಮತ್ತು ಜೆಡಿಎಸ್ ಈ ಮಣ್ಣಿಗೆ, ಮಣ್ಣಿನ ಮಕ್ಕಳಿಗೆ ಎಂದೂ ದ್ರೋಹ ಮಾಡುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ / ಜಾಹಿರಾತಿಗಾಗಿ 7019780535 ಸಂಖ್ಯೆಗೆ ಸಂಪರ್ಕಿಸಿ

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]