ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2019-20ನೇ ಶೈಕ್ಷಣಿಕ ವರ್ಷದಲ್ಲಿ ನಡೆದ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತರು ಸಮಾಜ ಕಲ್ಯಾಣ ಇಲಾಖೆ ವೆಬ್ಸೈಟ್ www.sw.kar.nic.in ಮೂಲಕ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು 2020ರ ಡಿಸೆಂಬರ್ 31 ಕೊನೆಯ ದಿನವಾಗಿದೆ.
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡಿದ ಅರ್ಹ ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ ನಂತರ ದೃಢೀಕೃತ ದಾಖಲಾತಿ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಹಿಂದಿನ ತರಗತಿಯ ವ್ಯಾಸಂಗ ಪ್ರಮಾಣ ಪತ್ರ/ಅಂಕಪಟ್ಟಿಗಳ, ಚಾಲ್ತಿಯಲ್ಲಿರುವ ವಿದ್ಯಾರ್ಥಿಗಳ ವೈಯಕ್ತಿಕ ಬ್ಯಾಂಕ್ ಖಾತೆಯ ವಿವರ, ಪಾಸ್ಪೋರ್ಟ್ ಅಳತೆಯ ಭಾವಚಿತ್ರವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬಳಿ ಇರುವ ಜಿಲ್ಲಾಡಳಿತ ಭವನದಲ್ಲಿರುವ ಕೊಠಡಿ ಸಂಖ್ಯೆ: 217, 2ನೇ ಮಹಡಿ ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ದೂ.ಸಂ.: 080-29787447, ಸಹಾಯಕ ನಿರ್ದೇಶಕರು, ದೇವನಹಳ್ಳಿ, ದೂ.ಸಂ.: 080-7681784, ದೊಡ್ಡಬಳ್ಳಾಪುರ, ದೂ.ಸಂ.: 080-7623681, ಹೊಸಕೋಟೆ, ದೂ.ಸಂ.: 080-7931528, ನೆಲಮಂಗಲ, ದೂ.ಸಂ.: 080-7723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಖಾಜಾ ಹುಸೇನ್ ಮುಧೋಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

