ದೊಡ್ಡಬಳ್ಳಾಪುರ: ನಗರದ ತೇರಿನಬೀದಿಯಲ್ಲಿನ ಪ್ರಸನ್ನ ಚಂದ್ರಮೌಳೇಶ್ವರಸ್ವಾಮಿ ಬ್ರಹ್ಮ ರಥೋತ್ಸವ ಡಿ.14 ರಂದು ಮಧ್ಯಾಹ್ನ 1 ಗಂಟೆಯಿಂದ ನಡೆಯಲಿದೆ. ಬ್ರಹ್ಮ ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ಪ್ರಾಕಾರೋತ್ಸವ ಹಾಗೂ ವಿಶೇಷ ಪೂಜಾ ಕಾರ್ಯಕ್ರಮಗಳಿವೆ.
ನಗರದ ಸಪ್ತಮಾತೃಕ ಮಾರಿಯಮ್ಮ ದೇವಾಲಯದಲ್ಲಿ ಹಾಗೂ ಚೌಡೇಶ್ವರಿ ದೇವಾಲಯದಲ್ಲಿ ಡಿ.14 ರಂದು ಸಂಜೆ ಲಕ್ಷ ದೀಪೋತ್ಸವ ನಡೆಯಲಿದೆ.
ಕಡಲೇಕಾಯಿ ಪರಿಷೆ: ನಗರದ ಕೊಂಗಾಡಿಯಪ್ಪ ಕಾಲೇಜು ಸಮೀಪದ ಬಯಲು ಬಸವಣ್ಣ ದೇವಸ್ಥಾನದ ಸೇವಾ ಟ್ರಸ್ಟ್, ಕರ್ನಾಟಕ ಕನ್ನಡ ಅಭಿಮಾನಿಗಳ ಸಂಘದ ವತಿಯಿಂದ ಡಿ.14 ರಂದು ಕನ್ನಡ ರಾಜ್ಯೋತ್ಸವ ಹಾಗೂ ಕಡಲೇಕಾಯಿ ಪರಿಷೆ ನಡೆಯಲಿದೆ. ಡಿ.13 ರಂದು ಸಂಜೆ 6ಕ್ಕೆ ಗಿರಿಜಾ ಕಲ್ಯಾಣೋತ್ಸವ ನಡೆಯಲಿದೆ. ಡಿ.14 ರಂದು 65ನೇ ಕನ್ನಡ ರಾಜ್ಯೋತ್ಸವ ಹಾಗೂ ಸಂಘದ 26ನೇ ವಾರ್ಷಿಕೋತ್ಸವದ ಅಂಗವಾಗಿ ಬೆಳಿಗ್ಗೆ 10.30ಕ್ಕೆ ಧ್ವಜಾರೋಹಣ ನಡೆಯಲಿದೆ.
ಬಸವಣ್ಣ ದೇವಾಲಯದಲ್ಲಿ ಕೊವಿಡ್-19 ಹಿನ್ನಲೆಯಲ್ಲಿ ಸರಳವಾಗಿ ಕಾರ್ಯಕ್ರಮ ಆಚರಿಸಲಾಗುವುದು. ತೀರ್ಥ ಪ್ರಸಾದ ಇರುವುದಿಲ್ಲ. ಭಕ್ತಾದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಳ್ಳಬೇಕು. ದೇವಾಲಯದ ಸುತ್ತಮುತ್ತ ಪೂಜಾ ಸಾಮಗ್ರಿಗಳ ಅಂಗಡಿಗಳ ಹೊರತಾಗಿ ಬೇರೆ ಅಂಗಡಿಗಳು ಹಾಗೂ ಆಟದ ಪ್ರದರ್ಶನಕ್ಕೆ ಅವಕಾಶವಿಲ್ಲ ಎಂದು ದೇವಾಲಯ ಟ್ರಸ್ಟ್ ಪ್ರಕಟಣೆ ತಿಳಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

