ದೊಡ್ಡಬಳ್ಳಾಪುರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಿ ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆಗೆ ಶಾಸಕ ಟಿ.ವೆಂಕಟರಮಣಯ್ಯ ಬೆಂಬಲ ಸೂಚಿಸಿದರು.
ನಗರದ ಬಸ್ ನಿಲ್ದಾಣದಲ್ಲಿ ನೌಕರರು ನಡೆಸುತ್ತಿರುವ ಮುಷ್ಕರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಾರಿಗೆ ನೌಕರರ ಸಮಸ್ಯೆಗಳನ್ನು ಬಗೆ ಹರಿಸದೆ ಕಾಲಹರಣ ಮಾಡುವ ಮೂಲಕ ರಾಜ್ಯ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ರೈತರ ಹೋರಾಟದಲ್ಲಿಯೂ ಇದೇ ರೀತಿ ಬೇಜವಬ್ದಾರಿಯಿಂದ ವರ್ತಿಸುವ ಮೂಲಕ ಪದೇ ಪದೇ ಜನಪರ ಕಾಳಜಿ ಇಲ್ಲವೆಂದು ಸಾಬೀತುಪಡಿಸುತ್ತಿದೆ ಎಂದರು.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾಲೂಕಿನಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ನಡೆಸಲು ಅನುದಾನ ನೀಡುತ್ತಿಲ್ಲ, ಈ ಕುರಿತು ಬಹಿರಂಗ ಚರ್ಚೆಗೆ ಸಿದ್ದ ಎಂದರು.
ಈ ವೇಳೆ ಕನ್ನಡಪಕ್ಷ, ಶಿವರಾಜ್ ಕುಮಾರ್ ಸೇನಾ ಸಮಿತಿ, ರೈತ ಸಂಘದ ಮುಖಂಡರು ಸಾರಿಗೆ ನೌಕರರ ಪ್ರತಿಭಟನೆ ಬೆಂಬಲ ನೀಡಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

