ದೊಡ್ಡಬಳ್ಳಾಪುರ: ನಗರದ ತೇರಿನ ಬೀದಿಯಲ್ಲಿ ಶ್ರೀ ಪ್ರಸನ್ನ ಚಂದ್ರಮೌಳೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವವು ಶ್ರದ್ಧಾ ಭಕ್ತಿಗಳಿಂದ ನೆರವೇರಿತು.
ಮುಜರಾಯಿ ಇಲಾಖೆ ಹಾಗೂ ದೇವಾಲಯದ ಭಕ್ತ ಮಂಡಲಿವತಿಯಿಂದ ಕೊವಿಡ್-19 ಹಿನ್ನಲೆಯಲ್ಲಿ ಈ ಬಾರಿ ಸರಳವಾಗಿ ಚಿಕ್ಕ ರಥದಲ್ಲಿ ನಡೆದ ಚಂದ್ರಮೌಳೇಶ್ವರ ಸ್ವಾಮಿಯ ರಥೋತ್ಸವಲ್ಲಿ ವಿವಿದಡೆಗಳಿಂದ ಆಗಮಿಸಿದ್ದ ಭಕ್ತರು ರಥಕ್ಕೆ ಬಾಳೆಹಣ್ಣು, ದವನ ಅರ್ಪಿಸಿ ಧನ್ಯತಾ ಭಾವ ಮೆರೆದರು.
ಪ್ರತಿ ವರ್ಷ ಐದು ಅಡಿ ಎತ್ತರದ ಕಲ್ಲಿನ ರಥಗಳ ಮೇಲೆ 5 ಅಂತಸ್ತಿನ ಭವ್ಯ ರಥದಲ್ಲಿ ನಡೆಯುತ್ತಿತ್ತು.
ಬ್ರಹ್ಮ ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ಗಿರಿಜಾ ಕಲ್ಯಾಣೋತ್ಸವ ನಡೆಯಿತು. ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

