ಬೆಂಗಳೂರು: ಜನತೆ ಕರೊನಾ ಸಂಕಷ್ಟದಲ್ಲಿರುವ ಕಾರಣ ನಾಳೆಯ ಜನ್ಮದಿನದವನ್ನು ಆಚರಿಸಿಕೊಳ್ಳುತ್ತಿಲ್ಲವೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವಿಟ್ ಮಾಡಿದ್ದಾರೆ.
ಅವರ ಟ್ವಿಟ್ ಸಂದೇಶದಂತೆ ಡಿ.16 ನನ್ನ ಜನ್ಮದಿನ. ಕೊರೋನಾ ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದೇನೆ. ಆ ದಿನ ಬೆಂಗಳೂರಿನಲ್ಲಿ ನಾನು ಲಭ್ಯವಿರುವುದಿಲ್ಲ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ನೀವಿರುವಲ್ಲಿಂದಲೆ ನನ್ನನ್ನು ಹಾರೈಸಿ. ನಿಮ್ಮ ಪ್ರೀತಿ ಅಭಿಮಾನ ದೊಡ್ಡದು.
ಪ್ರತಿ ಜನ್ಮದಿನಗಳು ನಮ್ಮ ಇರುವಿಕೆಯನ್ನು ನೆನಪಿಸುತ್ತವೆ ನಿಜ, ಆದರೆ ಬದುಕಿದ್ದಷ್ಟು ದಿನ ಕಷ್ಟದಲ್ಲಿರುವ ಜನರ ಒಳಿತಿಗೆ ನಿಸ್ವಾರ್ಥವಾಗಿ, ಕಾರುಣ್ಯಭರಿತವಾಗಿ ದುಡಿದಾಗ ನಮ್ಮ ಹುಟ್ಟು ಸಾರ್ಥಕವಾಗುತ್ತದೆ ಎಂಬುದು ನನ್ನ ನಂಬಿಕೆ ಮತ್ತು ನಡೆ ಎಂದಿದ್ದಾರೆ.
(ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

