ಬೆಂಗಳೂರು: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆ, ಎರಡನೇ ಹಂತದ ಗ್ರಾಮ ಪಂಚಾಯಿತಿಯ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಐದನೇ ದಿನವಾದ ಇಂದು(ದಿನಾಂಕ: 15.12.2020) ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ತಾಲ್ಲೂಕಿನ ಒಟ್ಟು 45 ಗ್ರಾಮ ಪಂಚಾಯತಿಯ 770 ಸ್ಥಾನಗಳ ಪೈಕಿ 123 ನಾಮ ಪತ್ರಗಳು ಸಲ್ಲಿಕೆಯಾಗಿದ್ದು, 117 ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಯಾಗದೆ ಖಾಲಿ ಉಳಿದಿವೆ.
ದೊಡ್ಡಬಳ್ಳಾಪುರ ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ 443 ಸ್ಥಾನಗಳಿಗೆ ಅನುಸೂಚಿತ ಜಾತಿ-21, ಅನುಸೂಚಿತ ಪಂಗಡ-02, ಹಿಂದುಳಿದ ಎ ವರ್ಗ-05, ಹಿಂದುಳಿದ ಬಿ ವರ್ಗ-02, ಸಾಮಾನ್ಯ ವರ್ಗ-35, ಒಟ್ಟು-65 ನಾಮಪತ್ರ ಸಲ್ಲಿಕೆಯಾಗಿದ್ದು, 37 ಸ್ಥಾನಗಳು ನಾಮಪತ್ರ ಸಲ್ಲಿಸದೆ ಖಾಲಿ ಉಳಿದಿವೆ.
ದೇವನಹಳ್ಳಿ ತಾಲ್ಲೂಕಿನ 20 ಗ್ರಾಮ ಪಂಚಾಯಿತಿಗಳ 327 ಸ್ಥಾನಗಳಿಗೆ ಅನುಸೂಚಿತ ಜಾತಿ-20, ಅನುಸೂಚಿತ ಪಂಗಡ-06, ಹಿಂದುಳಿದ ಎ ವರ್ಗ-01, ಹಿಂದುಳಿದ ಬಿ ವರ್ಗ-00, ಸಾಮಾನ್ಯ ವರ್ಗ-31, ಒಟ್ಟು-58 ನಾಮಪತ್ರ ಸಲ್ಲಿಕೆಯಾಗಿದ್ದು, 80 ಸ್ಥಾನಗಳು ನಾಮಪತ್ರ ಸಲ್ಲಿಸದೆ ಖಾಲಿ ಉಳಿದಿವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

