ಬೆಂಗಳೂರು: ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ 61ನೇ ವರ್ಷದ ಜನ್ಮದಿನದ ಸಂಭ್ರಮ.
ಕೋವಿಡ್-19 ಹಿನ್ನೆಲೆಯಲ್ಲಿ ಜನತೆ ಸಂಕಷ್ಟದಲ್ಲಿರುವ ಕಾರಣ ಜನ್ಮದಿನದವನ್ನು ಆಚರಿಸಿಕೊಳ್ಳುವುದಿಲ್ಲ ಎಂದು ಈ ಮುಂಚೆಯೇ ಹೆಚ್‌ಡಿಕೆ ತಿಳಿಸಿದ್ದರೂ. ಆದರೂ ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಕುಮಾರಸ್ವಾಮಿ ಅವರಿಗೆ ಶುಭಕೋರಿರುವ ಸಂದೇಶಗಳಿಂದ ತುಂಬಿಹೋಗಿವೆ.
ಮತ್ತೊಂದೆಡೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಕುಮಾರಸ್ವಾಮಿ ಅವರಿಗೆ ಟ್ವಿಟ್ ಮೂಲಕ ಜನ್ಮದಿನದ ಶುಭಕೋರಿದ್ದಾರೆ. ಅವರ ಟ್ವಿಟ್ ಸಂದೇಶದಂತೆ – ಮಾಜಿ ಮುಖ್ಯಮಂತ್ರಿಗಳು, ಆತ್ಮೀಯರೂ ಆಗಿರುವ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಆಶೀರ್ವಾದ ಸದಾ ಇರಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

