ವಿಧಾನಪರಿಷತ್ ಘಟನೆ ಇದು ಸಾಂವಿಧಾನಿಕ ಪ್ರಜಾಪ್ರಭುತ್ವ ಅಲ್ಲ, ನರೇಂದ್ರ ಮೋದಿ ಪ್ರಜಾಪ್ರಭುತ್ವ : ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ವಿಧಾನಪರಿಷತ್ ನಲ್ಲಿ ಬಿಜೆಪಿ ಸಚಿವರು ಮತ್ತು ಸದಸ್ಯರಿಂದ ನಡೆದಿರುವ ಗೂಂಡಾಗಿರಿ ರಾಜ್ಯದ ಮಾತ್ರವಲ್ಲ, ದೇಶದ ಸಂಸದೀಯ ಪ್ರಜಾಪ್ರಭುತ್ವ ಇತಿಹಾಸದ ಕಪ್ಪು ಅಧ್ಯಾಯ. ಇದು ಖಂಡಿತ ಸಾಂವಿಧಾನಿಕ ಪ್ರಜಾಪ್ರಭುತ್ವ ಅಲ್ಲ, ಇದು ನರೇಂದ್ರ ಮೋದಿ ಪ್ರಜಾಪ್ರಭುತ್ವ. This is Criminal act ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಧಾನಪರಿಷತ್ನಲ್ಲಿ ನಡೆದ ಘಟನೆಯನ್ನು ವ್ಯಾಖ್ಯಾನಿಸಿದ್ದಾರೆ.

ಈ ಕುರಿ ತಮ್ಮ‌ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ಅವರು, ವಿಧಾನಪರಿಷತ್ ಸಭಾಪತಿಗಳನ್ನು ಅವರ ಕಚೇರಿಯಲ್ಲಿ ಬಲತ್ಕಾರದಿಂದ ಕೂಡಿಹಾಕಿ, ಅವರ ಅನುಮತಿ ಇಲ್ಲದೆ ಉಪಸಭಾಪತಿಗಳನ್ನು ಸಭಾಪತಿ ಪೀಠದ ಮೇಲೆ ಕೂರಿಸಿ ಕಲಾಪ ನಡೆಸಲು ಹೊರಟಿರುವ ಬಿಜೆಪಿ ಸದಸ್ಯರು ಹಾಡಹಗಲೇ ಸಂವಿಂಧಾನಕ್ಕೆ ಅಪಚಾರ ಎಸಗಿದ್ದಾರೆ, ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಿದ್ದಾರೆ.

ವಿಧಾನಸಭೆ ಮತ್ತು ವಿಧಾನಪರಿಷತ್ ಕಲಾಪ ನಡೆಸಲು ಸರ್ವಸಮ್ಮತಿಯಿಂದ ರಚಿಸಲಾದ ನಿಯಮಾವಳಿಗಳಿವೆ. ಬಿಜೆಪಿ ಸದಸ್ಯರ ಇಂದಿನ ನಡವಳಿಕೆ ಆ ನಿಯಮಾಳಿಗಳಿಗೆ ಅನುಗುಣವಾಗಿತ್ತೇ ಎಂದು ಕಾನೂನು ಸಚಿವರು ಮಾತ್ರವಲ್ಲ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಜನತೆಗೆ ತಿಳಿಸಬೇಕು.

ವಿಧಾನ ಪರಿಷತ್ ಸಭಾಪತಿ ವಿದೇಶ ಪ್ರವಾಸ, ಅನಾರೋಗ್ಯ ಇಲ್ಲವೇ ಇನ್ನು ಯಾವುದೋ ಕಾರಣಕ್ಕೋ ಕರ್ತವ್ಯನಿರ್ವಹಣೆ ಮಾಡಲು ಸಾಧ್ಯವಾಗದೆ ಇದ್ದಾಗ ಸಭಾಪತಿಯಾಗಿ ಕಾರ್ಯನಿರ್ವಹಿಸಲು ಅವರು ಉಪಸಭಾಪತಿಯವರಿಗೆ ಅವಕಾಶವನ್ನು ನೀಡಬಹುದೆಂದು ಸದನದ ನಿಯಮಾವಳಿ ಹೇಳಿದೆ. ಇದರ ಪಾಲನೆಯಾಗಿದೆಯೇ?

ವಿಧಾನಪರಿಷತ್ ನ ಬಿಜೆಪಿ ಸದಸ್ಯರು ಸಭಾಪತಿ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲು ನೋಟೀಸ್ ನೀಡಿದ್ದರು. ನಿಯಮಾವಳಿ ಪ್ರಕಾರ ಅದರ ಇತ್ಯರ್ಥಕ್ಕೆ ಹದಿನಾಲ್ಕು ದಿನಗಳ ಕಾಲಾವಕಾಶ ಇದೆ. ಆದರೆ ನೊಟೀಸ್ ಕ್ರಮಬದ್ದವಾಗಿಲ್ಲ ಎಂದು ಸಭಾಪತಿಯವರು ತಿರಸ್ಕರಿಸಿದ್ದ ಕಾರಣ ಆ ವಿಷಯ ಇಂದಿನ ಅಜೆಂಡಾದಲ್ಲಿ ಇರಲಿಲ್ಲ.

ಅವಿಶ್ವಾಸ ನಿರ್ಣಯ ಅಜೆಂಡಾದಲ್ಲಿ ಸೇರ್ಪಡೆಯಾದ ನಂತರ ಸದನದಲ್ಲಿ ಅದನ್ನು ಕನಿಷ್ಠ ಹತ್ತು ಜನ ಯಾವುದೇ ಚರ್ಚೆ ಇಲ್ಲದೆ ಬೆಂಬಲಿಸಬೇಕು. ಅದರ ಆಧಾರದಲ್ಲಿ ಮುಂದಿನ ಐದು ದಿನಗಳೊಳಗೆ ನಿರ್ಣಯದ ಚರ್ಚೆಗೆ ಸಭಾಪತಿಗಳು ದಿನ ಗೊತ್ತುಪಡಿಸಬೇಕು. ಈ ನಿಯಮ ಪಾಲನೆಯಾಗಿದೆಯೇ?

ಬಿಜೆಪಿಯವರ ಅವಿಶ್ವಾಸ ನಿರ್ಣಯದ ನೊಟೀಸ್ ಸಭಾಪತಿಯವರಿಂದ ತಿರಸ್ಕೃತಗೊಂಡಿದೆ ಮತ್ತು ಅಜೆಂಡಾದಲ್ಲಿಯೂ ಇರಲಿಲ್ಲ. ಹೀಗಿದ್ದಾಗ ಬಿಜೆಪಿ ಸದಸ್ಯರೇ ಅಜೆಂಡಾವನ್ನು ನಿರ್ಧರಿಸಿ, ತಾವೇ ಉಪಸಭಾಪತಿಯವರನ್ನು ಅಕ್ರಮವಾಗಿ ಪೀಠದಲ್ಲಿ ಕೂರಿಸಿ ತಾವೇ ನಿರ್ಧರಿಸಿದ ಅಜೆಂಡಾ ಮೂಲಕ ಕಲಾಪ ನಡೆಸಲು ಇದೇನು ಬನಾನ ರಿಪಬ್ಲಿಕಾ?

ವಿಧಾನಪರಿಷತ್ ಅಧಿವೇಶನ ನಡೆಸಲು ಸಂಸದೀಯ ವ್ಯವಹಾರಗಳ ಖಾತೆಯ ಕಾರ್ಯದರ್ಶಿಗಳು ಸಭಾಪತಿಯವರಿಗೆ ನೇರವಾಗಿ ಪತ್ರ ಬರೆದಿದ್ದೇ ಅಕ್ರಮ ನಡವಳಿಕೆ. ಹೀಗಿದ್ದರೂ ಸಭಾಪತಿಗಳು ಸಂಘರ್ಷಕ್ಕಿಳಿಯದೆ ಸೌಜನ್ಯಪೂರ್ವಕವಾಗಿ ಅಧಿವೇಶನ ಕರೆದಿದ್ದಾರೆ.

ನಿಯಮಾವಳಿ ಪ್ರಕಾರ ಸದನದಲ್ಲಿ ಕೋರಮ್ ಇರುವ ಬಗ್ಗೆ ಮಾರ್ಷಲ್ ಗಳಿಂದ ದೃಡೀಕರಿಸಿದ ನಂತರ ಸೂಚನಾ ಗಂಟೆ ನಿಲ್ಲಿಸಲು ತಿಳಿಸಿ ಸಭಾಪತಿಗಳು ಬಂದು ಪೀಠವನ್ನು ಅಲಂಕರಿಸಬೇಕಾಗುತ್ತದೆ. ಇಂದು ಸೂಚನಾಗಂಟೆ ನಿಲ್ಲಿಸುವ ಮೊದಲೇ ಬಿಜೆಪಿ ಸದಸ್ಯರು ಉಪಸಭಾಪತಿಯವರನ್ನು ಕೂರಿಸಿ ಕಲಾಪ ನಡೆಸಲು ಹೊರಟಿದ್ದಾರೆ.

ರಾಜ್ಯದ ಸಚಿವರಾದ ಡಾ.ಅಶ್ವತ್ ನಾರಾಯಣ್ ಅವರು ಖುದ್ದಾಗಿ ಸಭಾಪತಿ ಪೀಠದಲ್ಲಿ ಉಪಸಭಾಪತಿಯವರನ್ನು ಅಕ್ರಮವಾಗಿ ಕೂರಿಸ್ತಾರೆ, ಕಾನೂನು ಸಚಿವ ಮಾಧುಸ್ವಾಮಿ ಅವರು ಸದನದಲ್ಲಿ ಮಾರ್ಷಲ್ ಗಳಿಗೆ ಧಮಕಿ ಹಾಕ್ತಾರೆ. ಇಬ್ಬರೂ ತಮ್ಮ ಪಕ್ಷದ ಸದಸ್ಯರನ್ನು ಗೂಂಡಾಗಿರಿಗೆ ಪ್ರಚೋದಿಸುತ್ತಾರೆ. ಇವರು ಸಚಿವರಾಗಲು ಅರ್ಹರೇ?

ವಿಧಾನಪರಿಷತ್ ನಲ್ಲಿ ಇಂದು ನಡೆದಿರುವ ಘಟನಾವಳಿಗಳು ಬಿಜೆಪಿ ಮತ್ತು ಜೆಡಿ(ಎಸ್) ಸದಸ್ಯರು ಕೂಡಿ ನಡೆಸಿರುವ ಯೋಜಿತ ಷಡ್ಯಂತ್ರ. ಇದರಿಂದ ಬಿಜೆಪಿ ಮತ್ತು ಜೆಡಿ (ಎಸ್) ನಡುವಿನ ಒಳಒಪ್ಪಂದ ಬಯಲಾಗಿದೆ. ಇದಕ್ಕಾಗಿ ಎರಡೂ ಪಕ್ಷಗಳ ನಾಯಕರು ರಾಜ್ಯದ ಜನತೆಯ ಕ್ಷಮೆ ಕೇಳಬೇಕು.

ಘನತೆವೆತ್ತ ರಾಜ್ಯಪಾಲರು ವಿಧಾನಪರಿಷತ್ ನಲ್ಲಿ ನಡೆದ ಘಟನಾವಳಿಗಳನ್ನು ನಿಷ್ಪಕ್ಷಪಾತನದಿಂದ, ಸಂಸದೀಯ ಪ್ರಜಾಪ್ರಭುತ್ವದ ಆಶಯಗಳನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ಭರವಸೆ ನಮಗಿದೆ ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]