ಪ್ರಖ್ಯಾತ ಘಾಟಿ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವ, ದನಗಳ ಜಾತ್ರೆ ರದ್ದು ಮಾಡುವಂತೆ ಜಿಲ್ಲಾಧಿಕಾರಿಗೆ ಪತ್ರ / ಸಾರ್ವಜನಿಕ ವಲಯದಲ್ಲಿ ಆಕ್ಷೇಪ

ದೊಡ್ಡಬಳ್ಳಾಪುರ: ಕರ್ನಾಟಕದ ಪ್ರಸಿದ್ಧ ನಾಗರಾಧನೆಯ ಕ್ಷೇತ್ರ ತಾಲೂಕಿನ ಘಾಟಿ ಸುಬ್ರಹ್ಮಣ್ಯ  ಕ್ಷೇತ್ರದಲ್ಲಿ  ಜ.19ರಂದು ನಡೆಯಬೇಕಿದ್ದ ಬ್ರಹ್ಮರಥೋತ್ಸವ ಹಾಗು ಅದಕ್ಕು ಮುಂಚಿತವಾಗಿ ಸೇರಲಾಗುತ್ತಿದ್ದ ದನಗಳ ಜಾತ್ರೆಯನ್ನು ರದ್ದು ಮಾಡುವಂತೆ ಆಡಳಿತ ಮಂಡಳಿ ನಿರ್ಣಯಿಸಿದೆ ಎಂದು ಘಾಟಿ ಕ್ಷೇತ್ರದ ಕಾರ್ಯನಿರ್ವಾಹಕ ಅಧಿಕಾರಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯವರಿಗೆ ಬರೆದಿದ್ದಾರೆ ಎನ್ನಲಾಗಿರುವ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪರ ವಿರೋಧ ಚರ್ಚೆಗೆ ಕಾರಣವಾಗಿದೆ.

ಪ್ರತಿ ವರ್ಷ ಜನವರಿಯಲ್ಲಿ ನಡೆಯುವ ಬ್ರಹ್ಮರಥೋತ್ಸವಕ್ಕೆ  ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದರು, ಅಲ್ಲದೆ ದನಗಳ ಜಾತ್ರೆಗೂ ಸಹ ವಿವಿಧ ರಾಜ್ಯಗಳಿಂದ ರಾಸುಗಳು ಸೇರುತ್ತಿದ್ದವು ಆದರೆ ಕೋವಿಡ್-19  ಹಿನ್ನೆಲೆ ಈ ಬಾರಿ ಬ್ರಹ್ಮರಥೋತ್ಸವ ಹಾಗೂ ದನಗಳ ಜಾತ್ರೆ ನಡೆಸದಿರಲು ದೇವಸ್ಥಾನ ಆಡಳಿತ ಮಂಡಳಿ ತೀರ್ಮಾನಿಸಿದೆ ಎಂದು ಪತ್ರದಲ್ಲಿದೆ.

ಪತ್ರದಲ್ಲಿನ ಸಂದೇಶದಂತೆ: 2020-21ರ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ವಾರ್ಷಿಕ ಜಾತ್ರಾ ಉತ್ಸವ ದಿನಾಂಕ  15-01-2021ರಿಂದ ಪ್ರಾರಂಭವಾಗಿ 19-01-2021ರ ಪುಷ್ಯ ಶುದ್ಧ ಷಷ್ಠಿಯ ಮಂಗಳವಾರದಂದು ಕ್ಷೇತ್ರದಲ್ಲಿ ಬ್ರಹ್ಮರಥೋತ್ಸವ ನಡೆಯ ಬೇಕಿತ್ತು. ಆದರೆ ಪ್ರತಿವರ್ಷದಂತೆ  ಈ ಬಾರಿಯು ಬ್ರಹ್ಮರಥೋತ್ಸವದಲ್ಲಿ ಲಕ್ಷಾಂತರ ಭಕ್ತರು  ಭಾಗವಿಸುವುದರಿಂದ, ಕೊರೊನಾ ವೈರಸ್  ಹರಡದಂತೆ ಎಚ್ಚರಿಕೆ ವಹಿಸಿರುವ ಹಿನ್ನೆಲೆ  ಬ್ರಹ್ಮರಥೋತ್ಸವ ಹಾಗೂ ರಾಸುಗಳ ಜಾತ್ರೆಯನ್ನು ರದ್ದು ಮಾಡುವಂತೆ ನಿರ್ಣಯಿಸಿ ದೇವಸ್ಥಾನದ ಆಡಳಿತ ಮಂಡಳಿ  ತೀರ್ಮಾನಿಸಿದೆ.

ಧಾರ್ಮಿಕ ದತ್ತಿ ಆಯುಕ್ತರ ಆದೇಶದ ಹಿನ್ನಲೆ ಕೊರೊನಾ ವೈರಸ್  ಹರಡುವಿಕೆಯನ್ನು  ತಡೆಗಟ್ಟುವ ನಿಟ್ಟಿನಲ್ಲಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ  ನಡೆಯುವ ಸೇವೆಗಳು,ಜಾತ್ರೆಗಳು, ಸಾಂಸ್ಕೃತಿಕ  ಕಾರ್ಯಕ್ರಮ ಮತ್ತು ಉತ್ಸವಗಳನ್ನು ರದ್ದು ಮಾಡಲಾಗಿದೆ, ಈ ಹಿನ್ನೆಲೆ ಘಾಟಿ ಸುಬ್ರಹ್ಮಣ್ಯ  ಕ್ಷೇತ್ರದ ಆಡಳಿತ ಮಂಡಳಿ ಸಹ ಸಾಂಕೇತಿಕ  ಬ್ರಹ್ಮರಥೋತ್ಸವ ಆಚರಣೆ ಮಾಡಲು  ತೀರ್ಮಾನಿಸಿದೆ.

ಈ ಆದೇಶಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ರಾಜಕೀಯ ಪ್ರಚಾರ, ಸಭೆಗಳಿಗೆ ಸೇರುವ ಜನರಿಗಿರದ ನಿಯಂತ್ರಣ ಧಾರ್ಮಿಕ ಕಾರ್ಯಗಳಿಗೆ ಏಕೆ ಎಂಬ ಪ್ರಶ್ನೆ ಕೇಳಿ ಬರುತ್ತಿದೆ.

(ಸಂಗ್ರಹ ಚಿತ್ರ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ 

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]