ಬೆಂಗಳೂರು: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆ, ಎರಡನೇ ಹಂತದ ಗ್ರಾಮ ಪಂಚಾಯಿತಿಯ ಚುನಾವಣೆಯ ನಾಮಪತ್ರ ಸಲ್ಲಿಕೆಯು ಕೊನೆಯಾಗಿದ್ದು(ದಿನಾಂಕ: 11.12.2020 ರಿಂದ 16.12.2020ರವರೆಗೆ) ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ತಾಲ್ಲೂಕಿನ ಒಟ್ಟು 45 ಗ್ರಾಮ ಪಂಚಾಯತಿಯ 770 ಸ್ಥಾನಗಳಿಗೆ, ಒಟ್ಟು 3482 ನಾಮ ಪತ್ರಗಳು ಸಲ್ಲಿಕೆಯಾಗಿದ್ದು, ಯಾವುದೇ ಸ್ಥಾನಗಳು ನಾಮಪತ್ರ ಸಲ್ಲಿಸದೆ ಖಾಲಿ ಉಳಿದಿರುವುದಿಲ್ಲ.
ದೊಡ್ಡಬಳ್ಳಾಪುರ ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ 443 ಸ್ಥಾನಗಳಿಗೆ ಅನುಸೂಚಿತ ಜಾತಿ-482, ಅನುಸೂಚಿತ ಪಂಗಡ-104, ಹಿಂದುಳಿದ ಎ ವರ್ಗ-211, ಹಿಂದುಳಿದ ಬಿ ವರ್ಗ-69, ಸಾಮಾನ್ಯ ವರ್ಗ-1086, ಒಟ್ಟು-1952 ನಾಮಪತ್ರ ಸಲ್ಲಿಕೆಯಾಗಿದ್ದು, ಯಾವುದೇ ಸ್ಥಾನಗಳು ನಾಮಪತ್ರ ಸಲ್ಲಿಸದೆ ಖಾಲಿ ಉಳಿದಿರುವುದಿಲ್ಲ.
ದೇವನಹಳ್ಳಿ ತಾಲ್ಲೂಕಿನ 20 ಗ್ರಾಮ ಪಂಚಾಯಿತಿಗಳ 327 ಸ್ಥಾನಗಳಿಗೆ ಅನುಸೂಚಿತ ಜಾತಿ-422, ಅನುಸೂಚಿತ ಪಂಗಡ-146, ಹಿಂದುಳಿದ ಎ ವರ್ಗ-97, ಹಿಂದುಳಿದ ಬಿ ವರ್ಗ-16, ಸಾಮಾನ್ಯ ವರ್ಗ-849, ಒಟ್ಟು-1530 ನಾಮಪತ್ರ ಸಲ್ಲಿಕೆಯಾಗಿದ್ದು, ಯಾವುದೇ ಸ್ಥಾನಗಳು ನಾಮಪತ್ರ ಸಲ್ಲಿಸದೆ ಖಾಲಿ ಉಳಿದಿರುವುದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

