ಬೆಂಗಳೂರು: ಹೊಸಕೋಟೆ ತಾಲೂಕು ಆರೋಗ್ಯಾಧಿಕಾರಿ ಡಾ.ಮಂಜುನಾಥ್ ಕಳೆದ ಎರಡು ದಿನಗಳಿಂದ ಕಣ್ಮರೆಯಾಗಿದ್ದಾರೆಂದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕುರಿತು ಅವರ ಗೆಳೆಯ ಗೋಪಾಲ್ ಕೃಷ್ಣ ಎನ್ನುವವರು ದೂರು ನೀಡಿದ್ದು, ಮಂಗಳವಾರ ರಾತ್ರಿ ಕರ್ತವ್ಯ ಮುಗಿಸಿ ಮನೆಗೆಂದು ತೆರಳಿದವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಹೊಸಕೋಟೆ ವ್ಯಾಪ್ತಿಯಲ್ಲಿನ ನಕಲಿ ಕ್ಲಿನಿಕ್‌ಗಳ ಮೇಲೆ ಇತ್ತೀಚಿಗೆ ಟಿಎಚ್‌ಓ ಡಾ.ಮಂಜುನಾಥ್ ಅವರು ದಾಳಿ ನಡೆಸಿದ್ದು ಹಲವು ರಾಜಕೀಯ ವ್ಯಕ್ತಿಗಳ ಆಕ್ಷೇಪಕ್ಕೆ ಒಳಗಾಗಿದ್ದರು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಇಂದು ಟಿಎಚ್‌ಓ ಅವರನ್ನು ಪತ್ತೆ ಮಾಡುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತರು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಯೆದುರು ಪ್ರತಿಭಟನೆ ನಡೆಸುತ್ತಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

