ಉಜಿರೆ: ಬಾಲಕನ ಅಪಹರಣ ಪ್ರಕರಣದ ಕುರಿತು ಪೊಲೀಸರು ಮಗುವನ್ನು ಸುರಕ್ಷಿತವಾಗಿ ರಕ್ಷಿಸುವಲ್ಲಿ ಯಶಸ್ವಿಯಾಗುವ ಮೂಲಕ ಸುಖಾಂತ್ಯ ಕಂಡಿದೆೆ.
ಕೋಲಾರದಲ್ಲಿ 6 ಜನ ಅಪಹರಣಕಾರರನ್ನು ಬಂಧಿಸಿರುವ ಪೊಲೀಸರು, ಮಗುವನ್ನು ರಕ್ಷಿಸಿದ್ದಾರೆ. ಉಜಿರೆಯ ಬಿಜೋಯ್ ಎನ್ನುವವರ ಮಗ ಅನುಭವ್ (8) ಮನೆಯಂಗಳದಲ್ಲಿ ಆಡುತ್ತಿದ್ದಾಗಲೇ ಅಪಹರಣಕಾರರು ಅಪಹರಿಸಿದ್ದರು.
ಕೋಲಾರದ ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಹರಣಕಾರರನ್ನು ಮಗುವಿನೊಂದಿಗೆ ಪೊಲೀಸರು ಶನಿವಾರ ಬೆಳಗ್ಗೆ 5 ರ ಹೊತ್ತಿಗೆ ಪತ್ತೆ ಹಚ್ಚಿದರು. ಕೂಡಲೇ ಅಪಹರಣಕಾರರನ್ನು ಕೋಲಾರ ಪೊಲೀಸ್ ಠಾಣೆಗೆ ಕರೆತರಲಾಯಿತು ಎನ್ನಲಾಗಿದೆ.
11ರ ವೇಳೆಗೆ ಕೋಲಾರ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿ, ನಂತರ ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆತರಲಾಗುತ್ತದೆ ಎನ್ನಲಾಗಿದ್ದು, ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ., ಉಪನಿರೀಕ್ಷಕ ಬಂದಕುಮಾರ್, ಧರ್ಮಸ್ಥಳ ಠಾಣೆ ಉಪನಿರೀಕ್ಷಕ ಪವನ್ ಕುಮಾರ್ ನೇತೃತ್ವದ ವಿಶೇಷ ತಂಡ ಹಾಜರು ಪಡಿಸುವ ಸಾಧ್ಯತೆ ಇದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

