ದೊಡ್ಡಬಳ್ಳಾಪುರ: ವಾತ್ಸಲ್ಯ ಧಾಮ ಚಾರಿಟಬಲ್ ಟ್ರಸ್ಟ್ ವತಿಯಿಂದ ಮಹಿಳೆಯರಿಗೆ ಉಚಿತವಾಗಿ ಸ್ವರಕ್ಷಣೆ ತರಬೇತಿಯನ್ನು ನಗರದ ಇನ್ಫೋ ಸಿಟಿ ಪಾರ್ಕಿನಲ್ಲಿ ಆಯೋಜಿಸಲಾಗಿತ್ತು.
ರಾಷ್ಟ್ರೀಯ ಭ್ರಷ್ಟಾಚಾರ ನಿಯಂತ್ರಣ ಮತ್ತು ಮಾನವ ಹಕ್ಕುಗಳ ಆಯೋಗದ ರಾಜ್ಯ ಅಧ್ಯಕ್ಷ ವಸಂತ್ ಮಹಿಳೆಯರಿಗೆ ಆಪತ್ ಕಾಲದಲ್ಲಿ ಸ್ವಯಂ ರಕ್ಷಣೆ ಕುರಿತು ತರಬೇತಿಯನ್ನು ನೀಡಿದರು.
ಈ ವೇಳೆ ಮಾತನಾಡಿದ ಅವರು, ಸಮಾಜದಲ್ಲಿ ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳ ಮೇಲಿನ ಸರಗಳ್ಳತನ, ಬಲತ್ಕಾರ ಗಳಂತಹ ದೌರ್ಜನ್ಯ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.ಇವುಗಳನ್ನು ಎದುರಿಸಲು ಹೆಣ್ಣುಮಕ್ಕಳು ತಮ್ಮ ರಕ್ಷಣೆಯನ್ನು ತಾವೇ ಮಾಡಿಕೊಳ್ಳುವುದು ಅಗತ್ಯವಾಗಿದ್ದು, ಸ್ವಯಂ ರಕ್ಷಣೆ ತರಬೇತಿ ಪ್ರತಿಯೊಬ್ಬ ಮಹಿಳೆಯರಿಗೂ ಅಗತ್ಯ ಎಂದರು.
ಕಾರ್ಯಕ್ರಮದಲ್ಲಿ ವಾತ್ಸಲ್ಯ ಧಾಮ ಚಾರಿಟಬಲ್ ಟ್ರಸ್ಟ್ ನ ಗೌರವಾಧ್ಯಕ್ಷೆ ಟಿ.ಲೀಲಾವತಿ ಸೇರಿದಂತೆ ಟ್ರಸ್ಟ್ ಸದಸ್ಯರು, ಸ್ಥಳೀಯ ಮಹಿಳೆಯರು ಭಾಗವಹಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

