ಬೆಂಗಳೂರು: ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ಮತದಾನ ದಿನವಾದ ಇಂದು ನೆಲಮಂಗಲ ತಾಲ್ಲೂಕಿನ ಮಹದೇವಪುರ ಮತಗಟ್ಟೆಗೆ ರಾಜ್ಯ ಚುನಾವಣಾ ಆಯೋಗದ ಆಯುಕ್ತರಾದ ಬಿ.ಬಸವರಾಜು ಅವರು ಭೇಟಿ ನೀಡಿ, ಮತದಾನ ಕಾರ್ಯಗಳನ್ನು ಪರಿಶೀಲಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್. ಕೆ.ನಾಯಕ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸಂಜೆ 5.00 ಗಂಟೆಯವರೆಗಿನ ಮೊದಲ ಹಂತದ ಚುನಾವಣೆಯಲ್ಲಿ ಹೊಸಕೋಟೆ ಶೇ.93.25 ಹಾಗೂ ನೆಲಮಂಗಲ ಶೇ.91.67ರಷ್ಟು ಮತದಾನವಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.

