ಬೆಂಗಳೂರು: ನೆಲಮಂಗಲ, ಹೊಸಕೋಟೆ ತಾಲೂಕಿನಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಶೇ.92.35ರಷ್ಟು ಮತದಾನವಾಗಿದೆ.
ಹೊಸಕೋಟೆ ತಾಲೂಕಿನಲ್ಲಿ ಶೇ.93.34ರಷ್ಟು ಮತದಾನ, ನೆಲಮಂಗಲ ತಾಲೂಕಿನಲ್ಲಿ ಶೇ. 91.05ರಷ್ಟು ಸೇರಿ ಒಟ್ಟು: ಶೇ.92.35ರಷ್ಟು ಮತದಾನವಾಗಿದೆ.
ಡಿ-ಮಸ್ಟರಿಂಗ್ ಕೇಂದ್ರ ಪರಿಶೀಲಿಸಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ: ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ, ಮತದಾನದ ದಿನವಾದ ಇಂದು ನೆಲಮಂಗಲ ತಾಲ್ಲೂಕಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್.ರವೀಂದ್ರ ಅವರು ಭೇಟಿ ನೀಡಿ, ತಾಲ್ಲೂಕು ಕೇಂದ್ರದಲ್ಲಿ ಸ್ಥಾಪಿಸಲಾಗಿರುವ ಡಿ-ಮಸ್ಟರಿಂಗ್ ಕೇಂದ್ರದಲ್ಲಿ ಕಲ್ಪಿಸಲಾಗಿರುವ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್. ಕೆ.ನಾಯಕ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.

