ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂ ಬದಲಾಗಿ ನಾಳೆ, ಅಂದರೆ ದಿನಾಂಕ 24.12.2020 ರಿಂದ ಜನವರಿ 01, 2021 ರವರೆಗೆ, ರಾತ್ರಿ 11:00 ಗಂಟೆಯಿಂದ ಬೆಳಗ್ಗೆ 5:00 ಗಂಟೆಯವರೆಗೆ (ದಿನಾಂಕ 02.01.2021ರ ಬೆಳಗ್ಗೆ 5:00 ಗಂಟೆ) ಜಾರಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಟ್ವಿಟ್ ಮೂಲಕ ಈ ಸ್ಪಷ್ಟಣೆ ನೀಡಿರುವ ಅವರು, ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ, ದಿನಾಂಕ 24.12.2020 ರ ರಾತ್ರಿ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು (ಮಿಡ್ ನೈಟ್ ಮಾಸ್) ಯಾವುದೇ ಅಡಚಣೆಯಿಲ್ಲದೆ ಮಾಡಬಹುದು ಎಂದಿದ್ದಾರೆ.
ಇದಕ್ಕು ಮುನ್ನ ಬೆಳಗ್ಗೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಇಂದು ರಾತ್ರಿಯಿಂದಲೇ ಜನವರಿ 2ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾತ್ರಿ 10ಗಂಟೆಯಿಂದ ಬೆಳಗ್ಗೆ 6ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದರು.
ಕೋವಿಡ್ ಸಾಂಕ್ರಾಮಿಕವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಸಂಬಂಧ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಅವರು. ಈ ಮೂಲಕ ಹೊಸ ಸ್ವರೂಪದ ಕೊರೋನಾ ವೈರಸ್ ಹರಡುವಿಕೆ ನಿಯಂತ್ರಿಸಲು ಕರ್ಫ್ಯೂ ಜಾರಿ ಮಾಡಿದ ಮೊದಲ ರಾಜ್ಯ ಕರ್ನಾಟಕವಾಗಿದೆ. ಬೆಂಗಳೂರಷ್ಟೇ ಅಲ್ಲ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ.
ರಾತ್ರಿ 10 ಗಂಟೆಯ ನಂತರ ಜನರು ಮನೆಯಿಂದ ಹೊರಗೆ ಬರುವಂತಿಲ್ಲ. ಅಂಗಡಿ ಮುಂಗಟ್ಟುಗಳು ಬಾಗಿಲು ಬಂದ್ ಮಾಡಬೇಕು. ಅಂತರರಾಜ್ಯ ಜನ ಸಂಚಾರವನ್ನೂ ನಿಷೇಧಿಸಲಾಗಿದೆ. ಆದರೆ, ರಾತ್ರಿಯ ಹೊತ್ತು ಔಷಧ ಅಂಗಡಿ, ಆಸ್ಪತ್ರೆ ಇತ್ಯಾದಿ ಅಗತ್ಯ ಸೇವೆಗಳಿಗೆ ಅವಕಾಶ ಇರುತ್ತದೆ.
ಜನವರಿ 1ರಂದು ಶಾಲೆಗಳನ್ನ ಪುನಾರಂಭಿಸುವ ಸರ್ಕಾರದ ನಿರ್ಧಾರವನ್ನು ಈ ವೇಳೆ ಪರಿಷ್ಕರಿಸಲಾಗಿಲ್ಲ. ಇನ್ನೆರಡು ಮೂರು ದಿನಗಳಲ್ಲಿ ಪರಿಸ್ಥಿತಿ ನೋಡಿಕೊಂಡು ನಿರ್ಧರಿಸಲಾಗುವುದು. ಸದ್ಯಕ್ಕೆ ಶಾಲೆಗಳನ್ನ ಆರಂಭಿಸುವ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

