ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಅವಿರತವಾಗಿ ಸೇವೆ ಸಲ್ಲಿಸುತ್ತಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಇತರೆ ಕ್ಷೇತ್ರಗಳಾದ ಕ್ರೀಡೆ, ಕಲೆ, ಸಾಹಿತ್ಯ, ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಮಹಿಳೆಯರಿಗೆ “ಕಿತ್ತೂರು ರಾಣಿ ಚೆನ್ನಮ್ಮ” ಪ್ರಶಸ್ತಿ ಹಾಗೂ ಸಾಹಸ ಪ್ರದರ್ಶಿಸಿ ಹೋರಾಡಿದ ಮಹಿಳೆಯರಿಗೆ “ವೀರ ಮಹಿಳೆ” ಪ್ರಶಸ್ತಿಗಾಗಿ ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಚಲಿತ ವಿದ್ಯಮಾನಗಳಿಂದ ಮಹಿಳಾ ಕ್ಷೇತ್ರದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿರುವಂತಹ, ಮಾಧ್ಯಮ ಮತ್ತು ಪತ್ರಿಕೆಗಳಲ್ಲಿ ಪ್ರಕಟಗೊಂಡಂತಹ ಕಳೆದ ಐದು ವರ್ಗಗಳಿಂದ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಅವಿರತವಾಗಿ ಸೇವೆ ಸಲ್ಲಿಸುತ್ತಿರುವವರು ಅರ್ಜಿ ಸಲ್ಲಿಸಬಹುದು.
ಆಸಕ್ತಿಯುಳ್ಳ ಸಂಸ್ಥೆ ಹಾಗೂ ವ್ಯಕ್ತಿಗಳು ಷರತ್ತುಗಳ ವಿವರ ಹಾಗೂ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ: 206, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಆಯಾ ತಾಲ್ಲೂಕು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು 2021ರ ಜನವರಿ 10 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂ.ಸಂ.: 080-29787445, ತಾಲ್ಲೂಕು ಶಿಶು ಅಭಿವೃಧ್ಧಿ ಯೋಜನಾಧಿಕಾರಿಗಳ ಕಚೇರಿ, ದೇವನಹಳ್ಳಿ ದೂ.ಸಂ.: 080-27682268, ದೊಡ್ಡಬಳ್ಳಾಪುರ ದೂ.ಸಂ.:080-27625228, ಹೊಸಕೋಟೆ ದೂ.ಸಂ.: 080-27931493, ನೆಲಮಂಗಲ ದೂ.ಸಂ.: 080-27722177 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕರಾದ ಪುಷ್ಪ.ಜಿ.ರಾಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

