ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ “ಚಿಗುರು-2020” ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯಕ್ರಮವನ್ನು 2020ರ ಡಿಸೆಂಬರ್ 28 ರಂದು ಬೆಳಿಗ್ಗೆ 11:00 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ದಾಬಸ್ ಪೇಟೆ ಮಾರ್ಗದಲ್ಲಿರುವ ಸೋಂಪುರ ಹೋಬಳಿಯ ಹೆಗ್ಗುಂದ ಅಂಚೆಯ ಶ್ರೀ ವನಕಲ್ಲು ಮಲ್ಲೇಶ್ವರ ಮಹಾ ಸಂಸ್ಥಾನ ಮಠದಲ್ಲಿ ಏರ್ಪಡಿಸಲಾಗಿದೆ.
ಶ್ರೀ ವನಕಲ್ಲು ಮಲ್ಲೇಶ್ವರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ಬಸವ ರಮಾನಂದ ಮಹಾಸ್ವಾಮಿಗಳು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಶ್ರೀ ವನಕಲ್ಲು ಮಲ್ಲೇಶ್ವರ ಮಹಾ ಸಂಸ್ಥಾನ ಮಠದ ಟ್ರಸ್ಟಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಸೋಂಪುರದ ಸದಸ್ಯರಾದ ನಂಜುಂಡಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾಗಡಿ ತಾಲ್ಲೂಕಿನ, ಹುಣಸಂದ್ರದ ರುದ್ರಮುನೇಶ್ವರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನರಸೀಪುರ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಮಂಜುನಾಥ, ಪ್ರಾಧ್ಯಾಪಕರು ಹಾಗೂ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ ಹಡಪದ ಅವರು ಭಾಗವಹಿಸಲಿದ್ದಾರೆ.
ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಾಯಕ ನಿರ್ದೇಶಕರಾದ ಬಿ.ಮಂಜುನಾಥ ಆರಾಧ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.(ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

