ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ಸಾಹಸ ಸಿಂಹ ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಬಾಲಗಂಗಾಧರನಾಥ ಸ್ವಾಮಿ ವೃತ್ತದಲ್ಲಿನ ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ತಡರಾತ್ರಿ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ.
ಘಟನೆ ಸಂಬಂಧ ವಿಷ್ಣುವರ್ಧನ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ದುಷ್ಕರ್ಮಿಗಳ ಪತ್ತೆಗೆ ಆಗ್ರಹಿಸಿದ್ದಾರೆ. ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಿಡಿಗೇಡಿ ಪತ್ತೆಗೆ ವಿಷ್ಣುವರ್ಧನ್ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಹಿಂದೆ ಪ್ರತಿಮೆಯನ್ನು ಇಲ್ಲಿಂದ ಕೆಲ ಕಿಡಿಗೇಡಿಗಳು ಎತ್ತೊಯ್ದಿದ್ದರು. ನಂತರ ಮತ್ತೆ ಪ್ರತಿಮೆಯನ್ನು ಇಡಲಾಗಿತ್ತು. ಈಗ ರಾತ್ರೋರಾತ್ರಿ ಪ್ರತಿಮೆ ಧ್ವಂಸಗೊಳಿಸುವ ಮೂಲಕ ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ.
ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಭಿಮಾನಿಗಳು ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಬಂಧಿಸುವಂತೆ ಆಗ್ರಹಿಸುತ್ತಿದ್ದಾರೆ. ಜೊತೆಗೆ ಇದೇ ಸ್ಥಳದಲ್ಲಿ ಮತ್ತೆ ಪ್ರತಿಮೆ ಸ್ಥಾಪಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

