ಬೆಂಗಳೂರು: ಬ್ರಿಟನ್‌ನಲ್ಲಿನ ಹೊಸ ಕರೊನಾ ಸೋಂಕಿನ ಆತಂಕ ರಾಜ್ಯದಲ್ಲಿ ತೀವ್ರವಾಗಿದ್ದು, ಯು.ಕೆ.ನಿಂದ ಬಂದ ರಾಜ್ಯದ ಮೂವರಲ್ಲಿ ಹೊಸ ಪ್ರಬೇಧದ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮಗಳಲ್ಲಿ ವರದಿಯಾದ ಗೊಂದಲಕಾರಿ ವರದಿ ಹಿನ್ನಲೆಯಲ್ಲಿ ಟ್ವಿಟ್ ಮಾಡುವ ಮೂಲಕ ಮೂವರಲ್ಲಿ ಸೋಂಕು ದೃಢ ಪಟ್ಟಿರುವುದಾಗಿ ತಿಳಿಸಿದ್ದು, ಹೊಸ ಪ್ರಬೇಧದ ವೈರಸ್ ಹರಡದಂತೆ ತಡೆಯಲು ತಜ್ಞರೊಂದಿಗೆ ಚರ್ಚಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ.
ಸುಧಾಕರ್ ಟ್ವಿಟ್: ಕೊರೊನಾ ವೈರಾಣುವಿನ ರೂಪಾಂತರಗೊಂಡ ಪ್ರಬೇಧವನ್ನು ಪತ್ತೆ ಮಾಡಲು ಯು.ಕೆ.ನಿಂದ ರಾಜ್ಯಕ್ಕೆ ಮರಳಿದ್ದ ವ್ಯಕ್ತಿಗಳನ್ನು ನಿಮ್ಹಾನ್ಸ್ ನಲ್ಲಿ ಪರೀಕ್ಷೆಗೊಳಪಡಿಸಲಾಗಿತ್ತು. ಈ ಪೈಕಿ ಮೂವರಲ್ಲಿ ಹೊಸ ಪ್ರಬೇಧದ ಸೋಂಕು ದೃಢಪಟ್ಟಿದ್ದು. ಹೊಸ ಪ್ರಬೇಧದ ವೈರಸ್ ಹರಡದಂತೆ ತಡೆಯಲು ತಜ್ಞರೊಂದಿಗೆ ಚರ್ಚಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

