ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ತಾಲ್ಲೂಕುಗಳ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ 2020ರ ಡಿಸೆಂಬರ್ 30ರಂದು ನಡೆಯಲಿರುವ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ 2020ರ ಡಿಸೆಂಬರ್ 30ರ ಬೆಳಿಗ್ಗೆ 6:00 ಗಂಟೆಯಿಂದ 31ರ ರಾತ್ರಿ 11:00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಸಿ.ಆರ್.ಪಿ.ಸಿ 1973ರ ಕಲಂ 144ರಂತೆ ನಿಷೇದಾಜ್ಞೆಯನ್ನು ಜಾರಿ ಮಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶಿಸಿದ್ದಾರೆ.
ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್.ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಲದೆ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ-2020ರ ಮತ ಎಣಿಕೆ ಕಾರ್ಯವು ಡಿಸೆಂಬರ್ 30ರಂದು ನಡೆದು ಫಲಿತಾಂಶ ಪ್ರಕಟಗೊಳ್ಳುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಶಾಂತಿ, ನೆಮ್ಮದಿ ಕಾಪಾಡುವ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾದ್ಯಂತ ಸಂತೆ ಹಾಗೂ ಜಾತ್ರೆಗಳನ್ನು ನಿಷೇಧಿಸಿದ್ದಾರೆ.
ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

