ದೊಡ್ಡಬಳ್ಳಾಪುರ: ನಗರದ ಕೊಂಗಾಡಿಯಪ್ಪ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಗ್ರಾಮಪಂಚಾಯಿತಿ ಸಾರ್ವತ್ರಿಕ ಚುನಾವಣೆ ಮತ ಎಣಿಕೆ ಕೇಂದ್ರಕ್ಕೆ ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಜಗದೀಶ್.ಕೆ.ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಚ್ಚುಕಟ್ಟಾದ ಮತ ಎಣಿಕೆ ಕೇಂದ್ರ ವ್ಯವಸ್ಥೆ ಮಾಡಿರುವ ತಾಲೂಕು ಆಡಳಿತಕ್ಕೆ ಪ್ರಶಂಸೆ ವ್ಯಕ್ತಪಡಿಸಿ ಮಾತನಾಡಿದ ಅವರು, ಮತ ಎಣಿಗೆ ಕಾರ್ಯ ತುರುಸಿನಿಂದ ನಡೆದಿದ್ದು ಸಂಜೆ 5ರ ವೇಳೆಗೆ ಮತ ಎಣಿಕೆ ಮುಕ್ತಾಯದ ವಿಶ್ವಾಸ ವ್ಯಕ್ತಪಡಿಸಿದರು.
ಈ ವೇಳೆ ತಹಶಿಲ್ದಾರ್ ಟಿ.ಎಸ್.ಶಿವರಾಜ್, ಸಮಾಜ ಕಲ್ಯಾಣಾಧಿಕಾರಿ ಸೋಮಶೇಖರ್ ಇದ್ದರು.
ಮೂಲಗಳ ಪ್ರಕಾರ ಮತ ಎಣಿಕೆ ಆರಂಭದಲ್ಲಿ ಅಂಚೆ ಮತ ಎಣಿಕೆ ಕಾರ್ಯ, ಏಕ ಸದಸ್ಯರಿರುವ ವಾರ್ಡ್ಗಳ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು ಜಿಲ್ಲಾಡಳಿತ 12ರ ನಂತರ ಮೊದಲ ವರದಿಯ ಫಲಿತಾಂಶ ಬಿಡುಗಡೆ ಮಾಡಲಿದೆ ಎನ್ನಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

