ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ “ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಸರ್ವ ಸದಸ್ಯರ ಸಾಮಾನ್ಯ ಸಭೆ”ಯು 2021ರ ಜ.4 ರಂದು ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯಲ್ಲಿ, ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿಗಳ ಅಧ್ಯಕ್ಷರುಗಳು, ಸದಸ್ಯರುಗಳು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರುಗಳು, ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

