ಮಕ್ಕಳ ಬಗ್ಗೆ ತುಸು ಉದಾರತೆ ಮತ್ತು ಕಾಳಜಿ. ಅಗತ್ಯತೆ ಅರಿತುಕೊಳ್ಳಿ / ಶಾಲೆಗಳ ಆರಂಭದ ಕುರಿತು ನಕಾರಾತ್ಮಕ ವರದಿಗೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಬೇಸರ

ಬೆಂಗಳೂರು: ಶಾಲೆಗಳ ಪುನರ್ ಆರಂಭದ ಸಂಭ್ರಮದ ನಡುವೆ, ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವ ನಕಾರಾತ್ಮಕ ವರದಿಯ ಕುರಿತು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.

ಶಾಲೆಗಳ ಪುನರ್ ಆರಂಭಕ್ಕೆ ರಾಜ್ಯಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಶಿಕ್ಷಣ ಸಚಿವರ ಕಾರ್ಯಕ್ಕೆ ಪೋಷಕರಿಂದ ಪ್ರಶಂಸೆಗೆ ಕಾರಣವಾಗಿದ್ದಾರೆ. ಆದರೆ ಶಾಲೆ ಆರಂಭವಾದ ಎರಡೇ ದಿನದ ಅಂತರಲ್ಲಿ ಶಿಕ್ಷಕರಿಗೆ ಕರೊನಾ. ಇದು ವಿದ್ಯಾಗಮವಲ್ಲ, ಬದಲಿಗೆ ಇದು “ಕೊರೋನಾಗಮ” ಎಂಬರ್ಥದಲ್ಲಿ ವರದಿ ಪ್ರಸಾರ ಮಾಡುತ್ತಿರುವ ಮಾದ್ಯಮಗಳ ನಡೆಗೆ ಬೇಸರ ವ್ಯಕ್ತಪಡಿಸಿರುವ ಅವರು. ಶಿಕ್ಷಣಕ್ಕೆ ಮತ್ತು ಮಕ್ಕಳಿಗೆ ಸಂಬಂಧಿಸಿದಂತೆ ಯಾವುದೇ ಸುದ್ದಿಯನ್ನು ದಯವಿಟ್ಟು ಉದ್ರೇಕಿಸಬೇಡಿ ಎಂದು ಮಾಧ್ಯಮಗಳ ಹೆಸರೇಳದೆ ಮನವಿ ಮಾಡಿದ್ದಾರೆ.

ಈ ಕುರಿತು ಫೇಸ್ಬುಕ್ ಪುಟದಲ್ಲಿ ಬರೆದು ಕೊಂಡಿದ್ದಾರೆ: ನನ್ನದೊಂದು  ಕಳಕಳಿಯ ಮನವಿ. ಕಳೆದ ನಾಲ್ಕು ದಿನಗಳಿಂದ ನಾನು ಶಾಲಾ ಕಾಲೇಜುಗಳಿಗೆ ಭೇಟಿ ನೀಡುತ್ತಿದ್ದೇನೆ. ನಿನ್ನೆ ಮತ್ತು ಇಂದು ಆನೇಕಲ್ಲು ಮತ್ತು ರಾಮನಗರ, ಮಾಗಡಿ ತಾಲೂಕುಗಳ ಶಾಲಾ-ಕಾಲೇಜುಗಳಲ್ಲಿ ಅಪಾರ ಸಂಖ್ಯೆಯ ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಮಾತನಾಡಿಸಿದ್ದೇನೆ. 

ಎಲ್ಲ ಕಡೆ ಶಾಲೆ-ಕಾಲೇಜುಗಳು ಪ್ರಾರಂಭವಾಗಿರುವ ಬಗ್ಗೆ ಒಳ್ಳೆಯ ಬೆಂಬಲ ಹಾಗೂ ಸಂತಸ ಕಂಡುಬರುತ್ತಿದೆ. ಮಕ್ಕಳ ಖುಷಿ, ಸಂಭ್ರಮ..ನೋಡಿಯೇ ಅನುಭವಿಸಬೇಕು. ಆದರೆ ಆಗಲೇ ಜೊತೆಜೊತೆಗೆ ಮತ್ತೆ ಆತಂಕ ಉಂಟುಮಾಡುವ ಸುದ್ದಿಗಳೂ ಪ್ರಕಟವಾಗುತ್ತಿವೆ.

ನಿನ್ನೆಯಿಂದ ತಾನೇ ನಮ್ಮ ಎಸ್.ಎಸ್.ಎಲ್.ಸಿ  ಮತ್ತು ಎರಡನೇ ಪಿಯುಸಿ ತರಗತಿಗಳು  ಹಾಗೂ ವಿದ್ಯಾ ಗಮ ಕಾರ್ಯಕ್ರಮಗಳು ಪ್ರಾರಂಭವಾಗಿರುವುದು. ಆಗಲೇ ಇಂದು ಶಾಲೆಗಳಲ್ಲಿ ಕೊರೋನಾ ಹರಡುತ್ತಿದೆ ಎಂದು ಅರ್ಥ ಬರುವಂತಹ  ಸುದ್ದಿಗಳನ್ನು ಗಮನಿಸಿದೆ. ಇದು ವಿದ್ಯಾಗಮವಲ್ಲ, ಬದಲಿಗೆ ಇದು “ಕೊರೋನಾಗಮ” ಎಂಬ ವರ್ಣರಂಜಿತ ನಾಮಕರಣ ಕೇಳಿ ಮನಸ್ಸಿಗೆ ವೇದನೆಯಾಯಿತು.

ಎಲ್ಲರಲ್ಲೂ, ಶಿಕ್ಷಣಕ್ಕೆ ಮತ್ತು ಮಕ್ಕಳಿಗೆ ಸಂಬಂಧಿಸಿದಂತೆ ಯಾವುದೇ ಸುದ್ದಿಯನ್ನು ದಯವಿಟ್ಟು Sensationalize ಮಾಡಬಾರದೆಂದು ನಾನು ಕಳಕಳಿಯಿಂದ  ವಿನಂತಿ ಮಾಡುತ್ತಿದ್ದೇನೆ. ಮಕ್ಕಳ ಬಗ್ಗೆ ತುಸು ಉದಾರತೆ ಮತ್ತು ಕಾಳಜಿ…ಅಗತ್ಯ ಎಂದು ನಮಗೆಲ್ಲಾ ತಿಳಿದೇ ಇದೆ. ಇಂದು ಅವರ ಮನಸ್ಥಿತಿಯನ್ನು ನಾವು ಅರ್ಥ ಮಾಡಿಕೊಳ್ಳಬೇಕು. 

ನಾವು ಯಾವುದೇ ವೃತ್ತಿಯಲ್ಲಿದ್ದರೂ ನಾವು ಈ ಸಮಾಜದ ಭಾಗ ಎಂಬುದೂ ಮುಖ್ಯ. ಎಲ್ಲ ಕಡೆ ಮಕ್ಕಳು ತರಗತಿಗೆ ಬಂದು ಶಿಕ್ಷಕರಿಂದ ಪಾಠ ಕೇಳಬೇಕೆಂಬ ತುಡಿತ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಹೆಣ್ಣು ಮಕ್ಕಳು “ಯಾವುದೇ ಕಾರಣಕ್ಕೂ ತರಗತಿ ಗಳನ್ನು ನಿಲ್ಲಿಸಬೇಡಿ” ಎಂದೂ ಸಹ ಮನವಿ  ಮಾಡಿರುವ ಸಂಗತಿಗಳೂ ನಡೆದಿವೆ. 

ವಿಶೇಷವಾಗಿ ಗ್ರಾಮೀಣ ಭಾಗದ ಶಾಲೆಗಳಲ್ಲಿ ಇದು ಅತ್ಯಂತ ಅಗತ್ಯವಾಗಿರುವುದು ಕಂಡುಬರುತ್ತಿದೆ. ನಾವೆಲ್ಲರೂ ಈ ಮಕ್ಕಳ ಶೈಕ್ಷಣಿಕ ಭವಿಷ್ಯದ ಬಗ್ಗೆ ಕಾಳಜಿ ಇಡೋಣ. ಇವರಿಗೆ ಶಿಕ್ಷಣ ದೊರಕದಿದ್ದರೆ ಇವರ ಬಾಳು ಎತ್ತ ಸಾಗುತ್ತದೋ ನಮಗೆ ತಿಳಿಯದು. 

ಗ್ರಾಮೀಣ ಭಾಗದಲ್ಲಿ ಬಾಲಕಾರ್ಮಿಕ, ಬಾಲ್ಯ ವಿವಾಹ….ಪ್ರಸಂಗಗಳು ಹೆಚ್ಚಾಗುವುದು ಸಮಾಜಕ್ಕೆ ಒಳಿತಲ್ಲ. ನನ್ನ ಈ ಪ್ರಾಮಾಣಿಕ ಅನಿಸಿಕೆ, ಮನವಿಯನ್ನು ದಯವಿಟ್ಟು ಯಾರೂ ತಪ್ಪಾಗಿ ತಿಳಿಯಬೇಡಿ ಎಂದು ಬರೆದುಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]