ಕೋವಿಡ್-19 ನಿಯಮಗಳನ್ವಯ ರಾಷ್ಟ್ರೀಯ ಯುವ ದಿನಾಚರಣೆ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚನೆ

ಬೆಂ.ಗ್ರಾ.ಜಿಲ್ಲೆ: ಕೊರೋನಾ ವೈರಾಣು ಸೋಂಕು ನಿಯಂತ್ರಣಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಕೋವಿಡ್-19 ನಿಯಮಗಳನ್ವಯ “ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಮತ್ತು ರಾಷ್ಟ್ರ್ಟ್ರೀಯ ಯುವ ದಿನಾಚರಣೆ” ಕಾರ್ಯಕ್ರಮವನ್ನು ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ  ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ರಾಷ್ಟ್ರ್ಟ್ರೀಯ ಯುವ ದಿನಾಚರಣೆ ಮತ್ತು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2021ರ ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ದೇವನಹಳ್ಳಿಯ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲು ಸಭೆಯಲ್ಲಿಲ ತೀರ್ಮಾನಿಸಲಾಯಿತು. ಕಳೆದ ವರ್ಷ ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಸಲಾಗಿತ್ತು.

ರಾಷ್ಟ್ರ್ಟ್ರೀಯ ಯುವ ದಿನಾಚರಣೆ ಮತ್ತು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಅಂಗವಾಗಿ ಎಸ್.ಎಸ್.ಎಲ್.ಸಿ, ಪಿಯುಸಿ, ಮತ್ತು ಪದವಿ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆಗಳನ್ನು ತಾಲ್ಲೂಕು ಮಟ್ಟದಲ್ಲಿ ಆಯೋಜಿಸಿ ವಿಜೇತ ವಿದ್ಯಾರ್ಥಿಗಳನ್ನು ಆಯಾ ತಾಲ್ಲೂಕಿನಲ್ಲಿ ಪ್ರಶಸ್ತಿ ಪತ್ರಗಳನ್ನು ನೀಡುವ ಮೂಲಕ ಗೌರವಿಸಬೇಕು ಹಾಗೂ ವಿಜೇತರನ್ನು ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಿಕೊಳ್ಳಬೇಕು ಎಂದರು.

ತಾಲ್ಲೂಕುವಾರು ಒಬ್ಬ ಶಿಕ್ಷಕರನ್ನು ನೇಮಿಸಿ, ಆ ಶಿಕ್ಷಕರು ಜಿಲ್ಲಾ ಮಟ್ಟದಲ್ಲಿ ನಡೆಯುವ ಕಾರ್ಯಕ್ರಮಕ್ಕೆಂದು ಆಗಮಿಸುವ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮೊದಲೇ ಕೋವಿಡ್ ಪರೀಕ್ಷೆ ಮಾಡಿಸಿರಬೇಕು ಎಂದರಲ್ಲದೆ, ಶಿಕ್ಷಕರು ಸಹ ತಮ್ಮ ಕಾಳಜಿ ವಹಿಸುವ ನಿಟ್ಟಿನಲ್ಲಿ ಈ ನಿಮಯಗಳನ್ನು ಪಾಲಿಸಬೇಕು ಎಂದರು.

ಕೋವಿಡ್ ನಿಯಮಗಳನ್ನು ಪಾಲಿಸಬೇಕಾದ್ದರಿಂದ ಕ್ರೀಡಾ ಕಿಟ್‍ಗಳನ್ನು ವಿತರಿಸುವಾಗ ಸಾಂಕೇತಿಕವಾಗಿ ವೇದಿಕೆ ಮೇಲೆ ಐದರಿಂದ ಹತ್ತು ಜನರಿಗೆ ಮಾತ್ರ ನೀಡಿ, ಕಾರ್ಯಕ್ರಮದ ನಂತರ ಉಳಿದವರಿಗೆ ತಲುಪಿಸುವ ವ್ಯವಸ್ಥೆ ಕಲ್ಪಿಸಬೇಕು ಎಂದರಲ್ಲದೆ, ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಥರ್ಮಲ್ ಸ್ಕ್ರೀನಿಂಗ್ ತಪಾಸಣೆ ನಡೆಸಲು ಆರೋಗ್ಯ ಸಿಬ್ಬಂದಿಗಳನ್ನು ನಿಯೋಜಿಸಬೇಕು ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಕಲ್ಪಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗೆ ತಿಳಿಸಿದರು.

ಶಾಲಾ ಕಾಲೇಜುಗಳು, ಪದವಿ ಹಂತದ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟಕೊಂಡು ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಸೇವೆ ಸಲ್ಲಿಸಿರುವ ಎನ್.ಎಸ್.ಎಸ್. ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುವಂತೆ ಸಲಹೆ ನೀಡಿದರು.

ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಜಗದೀಶ್.ಕೆ.ನಾಯಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಆರ್.ಗೀತಾ, ಸ್ಕೌಟ್ಸ್ ಅಂಡ್ ಗೈಡ್ಸ್‍ನ ಜಿಲ್ಲಾ ಮುಖ್ಯ ಆಯುಕ್ತ ನಾಗರಾಜು, ಜಿಲ್ಲೆಯ ಸರ್ಕಾರಿ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರು, ಎನ್.ಎಸ್.ಎಸ್ ಸಿಬ್ಬಂದಿ, ಸ್ಕೌಟ್ಸ್ ಅಂಡ್ ಗೈಡ್ಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]