ಬೆಂ. ಗ್ರಾ.ಜಿಲ್ಲೆ: 2020ರ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್ ಆಧಾರಿತ ಮೊಬೈಲ್ ಆ್ಯಪ್ ಬಳಸಿ ನಡೆಸಲು ತೀರ್ಮಾನಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿರುವ ಬೆಳೆಗಳನ್ನು “ಹಿಂಗಾರು ರೈತರ ಬೆಳೆ ಸಮೀಕ್ಷೆ 2020-21’’ ಎಂಬ ಆ್ಯಪ್‍ನಲ್ಲಿ ದಾಖಲಿಸುವಂತೆ ಬೆಂಗಳೂರು ಗ್ರಾಮಾಂತರ ಜಂಟಿ ನಿರ್ದೇಶಕರು ಕೋರಿದ್ದಾರೆ.
ಬೆಳೆ ಸಮೀಕ್ಷೆ ಮೂಲಕ ಸಂಗ್ರಹಿಸಿದ ಬೆಳೆ ಮಾಹಿತಿಯ ಮೇಲ್ವಿಚಾರಕರ ಮೂಲಕ ಅನುಮೋದನೆ ಪಡೆದ ನಂತರ ಈ ಮಾಹಿತಿಯನ್ನು ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನಗಳ ಖರೀದಿಗಾಗಿ, ಬೆಳೆ ವಿಮೆ ಯೋಜನೆಗಾಗಿ, ಬೆಳೆ ನಷ್ಟ ಪರಿಹಾರ ನೀಡುವ ಸಮಯದಲ್ಲಿ ಉಪಯೋಗಿಸಲಾಗುತ್ತದೆ. ಆದ್ದರಿಂದ ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿರುವ ಬೆಳೆಗಳನ್ನು “ಹಿಂಗಾರು ರೈತರ ಬೆಳೆ ಸಮೀಕ್ಷೆ 2020-21” ಎಂಬ ಆ್ಯಪ್ ಅನ್ನು ಪ್ಲೇಸ್ಟೋರ್‍ನಲ್ಲಿ (http://play.google.com/store/apps/details?id=com.csk.RabiTPKfarmer.cropsurvey) ಡೌನ್‍ಲೋಡ್ ಮಾಡಿಕೊಂಡು ಸ್ವತ: ಬೆಳೆ ಮಾಹಿತಿಯನ್ನು ದಾಖಲಿಸಬಹುದಾಗಿದೆ.
http://play.google.com/store/apps/details?id=com.csk.RabiTPKfarmer.cropsurvey ಲಿಂಕ್ ಅನ್ನು ಬಳಸಿ ಆ್ಯಪ್‍ನ್ನು ಡೌನ್‍ಲೋಡ್ ಮಾಡಿ ಆರ್ಥಿಕ ವರ್ಷ ಹಾಗೂ ಋತುವನ್ನು ದಾಖಲಿಸಬೇಕು. ನಂತರ ಆಧಾರ್ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿ, ಮೊಬೈಲ್ ಸಂಖ್ಯೆ ನಮೂದಿಸಿ ಸಕ್ರಿಯಗೊಳಿಸುವುದರಿಂದ ರೈತರ ಮೊಬೈಲ್ ಸಂಖ್ಯೆಗೆ ಓ.ಟಿ.ಪಿ. ಬರಲಿದ್ದು, ಓ.ಟಿ.ಪಿ. ಯನ್ನು ದಾಖಲಿಸಬೇಕು. ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ, ಸರ್ವೇ ನಂಬರ್, ಹಿಸ್ಸಾ, ರೈತರ ಮಾಲೀಕರ ಹೆಸರು ಆಯ್ಕೆ ಮಾಡಿ ಕ್ಷೇತ್ರವನ್ನು ನಮೂದಿಸಿ, ಸರ್ವೆ ನಂಬರ್‍ಗಳ ಗಡಿ ರೇಖೆಯೊಳಗೆ ನಿಂತು ವಿವರವನ್ನು ದಾಖಲಿಸಿ ಪೋಟೋ ತೆಗೆದು ಮಾಹಿತಿಯನ್ನು ಅಪ್‍ಲೋಡ್ ಮಾಡಬೇಕು.
ರೈತರು ಸ್ವತ: ತಮ್ಮ ಬೆಳೆ ಮಾಹಿತಿ ಅಪ್‍ಲೋಡ್ ಮಾಡಲು 2021ನೇ ಜನವರಿ 15 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ನಾಡ ಕಚೇರಿ, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿ, ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ರೇಷ್ಮೆ ಇಲಾಖೆ ಅಧಿಕಾರಿಗಳನ್ನು ಹಾಗೂ ಬೆಳೆ ಸಮೀಕ್ಷೆ ಸಹಾಯವಾಣಿ ಸಂಖ್ಯೆ: 8448447715 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರಾದ ಜಯಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.(ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

