ಬೆಂಗಳೂರು: ವಿದ್ಯಾರ್ಥಿಗಳು ಮತ್ತು ಪೋಷಕರು ನಿರೀಕ್ಷಿಸಿದ್ದಂತೆ ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜೂನ್ ಮೊದಲ ವಾರದಿಂದ ಪ್ರಾರಂಭವಾಗಲಿವೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಫೇಸ್ಬುಕ್ ಪುಟದಲ್ಲಿ ಬರೆದುಕೊಂಡಿರುವ ಅವರು, ಇಂದು ನಡೆದ ಸಭೆಯಲ್ಲಿ ಕೈ ಗೊಂಡ ನಿರ್ಧಾರ ಇದಾಗಿದ್ದು, ಶಿಕ್ಷಣ ಇಲಾಖೆಯು ಈ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರ್ತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ.
ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ, ಆದರೆ ಕನಿಷ್ಟ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದಿದ್ದಾರೆ. ಆ ಮೂಲಕ ಪರೀಕ್ಷೆ ಕುರಿತು ಉಂಟಾಗಿದ್ದ ಗೊಂದಲಗಳಿಗೆ ಅಂತ್ಯವಾಡಿದ್ದಾರೆ. ( ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ