ಕೊರಟಗೆರೆ: ಕಡ್ಡಾಯ ನಿಲುಗಡೆ ಸ್ಥಳದಲ್ಲಿ ವಿದ್ಯಾರ್ಥಿಗಳಿಗೆ ಬಸ್ ನಿಲ್ಲಿಸದೇ ತೆರಳುತ್ತಿದ್ದ ಸರಕಾರಿ ಬಸ್ಸಿಗೆ ಅಡ್ಡಗಟ್ಟಿ ಚಾಲಕನಿಗೆ ಶಿಕ್ಷಣ ಸಚಿವ ತರಾಟೆಗೆ ತೆಗೆದುಕೊಂಡ ಘಟನೆ ಶನಿವಾರ ಜರುಗಿದೆ.
ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐ.ಕೆ.ಕಾಲೋನಿಯ ರಾಜ್ಯ ಹೆದ್ದಾರಿಯಲ್ಲಿಯೇ ಬಸ್ಸನ್ನು ಅಡ್ಡಗಟ್ಟಿ ವಿದ್ಯಾರ್ಥಿಗಳಿಗೆ ಬಸ್ಸು ನಿಲ್ಲಿಸುವಂತೆ ಚಾಲಕನಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಶಿಕ್ಷಣ ಸಚಿವ ಸುರೇಶಕುಮಾರ್ ಬೆಂಗಳೂರಿನಿಂದ ದಾಬಸ್ ಪೇಟೆ-ಕೊರಟಗೆರೆ ಮಾರ್ಗವಾಗಿ ಮಧುಗಿರಿಯ ದೂರ ತರಂಗ ಶಿಕ್ಷಣ ಅಭಿಯಾನ ಕಾರ್ಯಕ್ರಮಕ್ಕೆ ತೆರಳುತ್ತೀದ್ದ ವೇಳೆ ಘಟನೆ ನಡೆದಿದೆ.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜಿಗೆ ತೆರಳಲು ಅನುಕೂಲ ಆಗುವಂತೆ ಸಾರಿಗೆ ಸಚಿವರ ಜೊತೆ ಚರ್ಚಿಸಿ ಗ್ರಾಮೀಣ ಸಾರಿಗೆ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

