ದೊಡ್ಡಬಳ್ಳಾಪುರ: ಆಧುನಿಕತೆ ಬೆಳೆದಂತೆ ದುಡಿಮೆ ಹೆಚ್ಚಿನ ಮಹತ್ವ ನೀಡುತ್ತಿರುವ ಪೋಷಕರು ಮಕ್ಕಳ ಬಗ್ಗೆ ನಿಗಾ ವಹಿಸುವುದನ್ನು ಕಡಿಮೆ ಮಾಡದೆ, ಮಕ್ಕಳಿಗೆ ಉತ್ತಮ ಜೀವನ ರೂಪಿಸಬೇಕೆಂದು ದೊಡ್ಡಬಳ್ಳಾಪುರ ಅಪರಾಧ ವಿಭಾಗದ ಸಬ್ ಇನ್ಸ್ಪೆಕ್ಟರ್ ರಂಗಸ್ವಾಮಿ ಸಲಹೆ ನೀಡಿದರು.
ತಾಲೂಕಿನ ಆರೂಢಿಯಲ್ಲಿ ಭಾಸ್ಕರ್ ಗೆಳೆಯರ ಬಳಗದ ವತಿಯಿಂದ ಆಯೋಜಿಸಿದ್ದ, ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಜೀವನ ಕಥೆಯಾದ ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ಧಾರವಾಹಿ ಪೊಸ್ಟರ್ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಗಳು ಸಾಕಾರವಾಗಬೇಕಾದಲ್ಲಿ ಮಕ್ಕಳ ಶೈಕ್ಷಣಿಕ ಜೀವನದ ಕಡೆ ಪೋಷಕರು ಹೆಚ್ಚಿನ ಒತ್ತು ನೀಡಬೇಕಿದೆ. ಮಕ್ಕಳಿಗೆ ಮಾದಕ ವಸ್ತುಗಳ ಪರಿಚಯವಾಗದಂತೆ ಕಾಳಜಿ ಮುಖ್ಯವಾಗಿದೆ. ಮಕ್ಕಳ ಜೀವನದ ಬೆಳವಣಿಗೆಯಲ್ಲಿ ಹಣಕ್ಕಲ್ಲದೆ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕಿದೆ ಎಂದರು.
ಡಿಸಿಸಿ ಬ್ಯಾಂಕ್ ಸದಸ್ಯ ಹರೀಶ್ ಕುಮಾರ್ ಮಾತನಾಡಿ, ಊರಿನ ಸರ್ವತೋಮುಖ ಅಭಿವೃದ್ಧಿಗೆ ಒಟ್ಟಾಗಿ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ಆರೋಗ್ಯ, ಸ್ವಚ್ಚತೆ ಕಾರ್ಯಕ್ರಮಗಳನ್ನು ಆಯೋಜಿಲು ತೀರ್ಮಾನಿಸಲಾಗಿದ್ದು, ಎಲ್ಲರ ಸಹಕಾರದಿಂದ ಕೆಲವೇ ದಿನಗಳಲ್ಲಿ ಗೆಳೆಯರ ಬಳಗ ರಚಿಸಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಗ್ರಾಮದಲ್ಲಿನ ಉತ್ತಮ ಕಾರ್ಯಗಳಿಗೆ ಒತ್ತು ನೀಡುವುದು, ಊರಿನ ಪ್ರತಿಭೆಗಳಿಗೆ ವೇದಿಕೆ ನೀಡುವುದರ ಜೊತೆಗೆ ಅವರ ಸಾಧನೆಯನ್ನು ಗುರುತಿಸಿ ಸನ್ಮಾನಿಸಿ, ಪ್ರೋತ್ಸಾಹಿಸುವ ಮೂಲಕ ಗ್ರಾಮದ ಕೀರ್ತಿಯನ್ನು ಸಾರುವ ಗುರಿ ಈ ಸಂಘದ್ದಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ರಾಷ್ಟ್ರೀಯ ಪೆಲೋಷಿಪ್ ಅವಾರ್ಡ್ ಪುಸ್ಕೃತ ಭಾಸ್ಕರ್ ಮಾತನಾಡಿ.ಯಾವುದೇ ಜಾತಿ ಮತ ಭೇದವಿಲ್ಲದೆ, ನಿಷ್ಪಕ್ಷಪಾತವಾಗಿ ಊರಿನ ಸರ್ವತೋಮುಖ ಅಭಿವೃದ್ಧಿಗೆ ಒಟ್ಟಾಗಿ ಸೇರಿ ದುಡಿಯುವ ಆಶಯ ಈ ಸಂಘದ್ದಾಗಿದ್ದು, ಬಾಬಾಸಾಹೇಬ್ ಅಂಬೇಡ್ಕರ್ ಅವರ ಆದರ್ಶ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಶಿಕ್ಷಣ ಸಂಯೋಜಕ ಮೈಲಾರಪ್ಪ ಡಾ.ಅಂಬೇಡ್ಕರ್ ಜೀವನದ ಕುರಿತು ಉಪನ್ಯಾಸ ಮಾಡಿದರು.
ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು.
ಈ ವೇಳೆ ಜಿಎಂಪಿಎಸ್ ಮುಖ್ಯಶಿಕ್ಷಕ ಸಿದ್ದರಾಮಪ್ಪ, ಗ್ರಾಪಂ ಸದಸ್ಯರಾದ ತಿಪ್ಪರಾಜು, ನವೀನ್ ಕುಮಾರ್, ವೆಂಕಟರಮಣಪ್ಪ, ಮಾಜಿ ಸದಸ್ಯ ಹರೀಶ್ ಕುಮಾರ್, ಶಿಕ್ಷಕ ಚಂದ್ರಕುಮಾರ್, ಮುಖಂಡರಾದ ಶಶಿ, ನರಸಿಂಹ ಸ್ವಾಮಿ, ನರಸಿಂಹರಾಜು, ಗೋವಿಂದರಾಜು, ಗಿರೀಶ್, ನರಸಿಂಹಸ್ವಾಮಿ, ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

