ಮತದಾರರಿಗೆ ಬೇಡವಾದ ಕಾಯ್ದೆಗಳನ್ನು ಜಾರಿಗೆ ತರಲು ಮುಂದಾಗುವ ಯಾವುದೇ ಪಕ್ಷ ಹೆಚ್ಚು ದಿನ ಆಡಳಿತದಲ್ಲಿ ಉಳಿಯಲ್ಲ: ಪ್ರಾಂತ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಬಸವರಾಜು

ದೊಡ್ಡಬಳ್ಳಾಪುರ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರಿಗೆ ಬೇಡವಾದ ಕಾಯ್ದೆಗಳನ್ನು ಜಾರಿಗೆ ತರಲು ಮುಂದಾಗುವ ಯಾವುದೇ ಪಕ್ಷ ಹೆಚ್ಚು ದಿನ ಆಡಳಿತದಲ್ಲಿ ಉಳಿಯಲು ಸಾಧ್ಯವಿಲ್ಲ ಎಂದು ಪ್ರಾಂತ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಬಸವರಾಜು ಹೇಳಿದರು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವುಂತೆ  ರೈತ-ಕಾರ್ಮಿಕ-ದಲಿತ ಹಾಗೂ ಕನ್ನಡ ಪರ ಸಂಘಟನೆಗಳ ವತಿಯಿಂದ ಸೋಮವಾರ ನಗರದ ಸಿದ್ದಲಿಂಗಯ್ಯ ವೃತ್ತದಿಂದ ಆರಂಭವಾದ ಜನ ಜಾಗೃತಿ ಜಾಥಾ ಸಭೆಯಲ್ಲಿ ಮಾತನಾಡಿದರು.

ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಇತ್ತೀಚೆಗೆ ಜಾರಿಗೆ ತರುತ್ತಿರುವ ಎಲ್ಲಾ ಕಾಯ್ದೆಗಳು ಜನ ವಿರೋಧಿಯಾಗಿವೆ. ಬಹು ಸಂಖ್ಯಾತ ಜನರಿಗೆ ಅಗತ್ಯವಿಲ್ಲದ ಕಾನೂನುಗಳನ್ನು ಜಾರಿಗೆ ತರುವುದರ ಉದ್ದೇಶವಾದರು ಏನಿದೆ ಎಂದು ಪ್ರಶ್ನಿಸಿದ ಅವರು, ಕೃಷಿ ಕಾಯ್ದೆಗಳು ರೈತರ ಅನುಕೂಲಕ್ಕಾಗಿ ರೂಪಿತವಾಗಿಲ್ಲ. ಕಲವೇ ಕೆಲವು ಖಾಸಗಿ ಕಂಪನಿಗಳನ್ನು ಮತ್ತಷ್ಟು ಶ್ರೀಮಂತವಾಗಿಸುವ ಗುರಿ ಹೊಂದಿವೆ. ದೆಹಲಿಯ ಗಡಿ ಪ್ರದೇಶದಲ್ಲಿ ಉತ್ತರ ಭಾರತದ ವಿವಿಧ ರಾಜ್ಯಗಳ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಕೇಂದ್ರ ಸರ್ಕಾರ ತಕ್ಕ ಬೆಲೆ ತೆರಲೇಬೇಕಿದೆ. ದೇಶದ ಇತಿಹಾಸದಲ್ಲೇ ರೈತರು ನಡೆಸುತ್ತಿರುವ ಬೃಹತ್‌ ಧರಣಿ ಇದಾಗಿದೆ. ರೈತರ ನಿರಂತರ ಧರಣಿಯ ಶ್ರಮ ವಿಫಲವಾಗುವುದಿಲ್ಲ ಎನ್ನುವ ವಿಶ್ವಾಸ ಇದೆ ಎಂದರು.

ಜಾಗೃತಿ ಜಾಥಾ ಉದ್ಘಾಟನೆಯಲ್ಲಿ ಭಾಗಹಿಸಿದ್ದ ಶಾಸಕ ಟಿ.ವೆಂಕಟರಮಣಯ್ಯ, ಕೃಷಿ ಕಾಯ್ದೆಗಳ ವಿರುದ್ಧ ನಮ್ಮ ದೇಶದಲಷ್ಟೇ ಅಲ್ಲದೆ ವಿದೇಶಿಯರು ಸಹ ದ್ವನಿ ಎತ್ತಿದ್ದಾರೆ. ಇಷ್ಟಾದರು ಸಹ ಪ್ರಧಾನ ಮಂತ್ರಿ ನರೇಂದ್ರಮೋದಿ ಅವರು ಮಕ್ಕಳು ಹಠ ಮಾಡುವಂತೆ ಕಾಯ್ದೆಗಳನ್ನು ಜಾರಿಗೆ ತರುವ ಮಾತನ್ನೇ ಹೇಳುತ್ತಿದ್ದಾರೆ. ಅಲ್ಲದೆ ಪ್ರಾಮಾಣಿಕ ಸತ್ಯಾಗ್ರಹಿಸಿಗಳ ವಿರುದ್ದ ಅಪಪ್ರಚಾರ ನಡೆಸುವುದು ಖಂಡನೀಯ. ಬಿಜೆಪಿ ಅಧಿಕಾರಕ್ಕೆ ಬಂದರೆ ದಿನ ಬಳಕೆ ವಸ್ತುಗಳು, ಪೆಟ್ರೋಲ್,ಡೀಸೆಲ್‌ ಬೆಲೆ ಅತ್ಯಂತ ಕಡಿಮೆಯಾಗಲಿವೆ ಎನ್ನುವ ಪ್ರಚಾರ ಮಾಡಲಾಗುತಿತ್ತು. ಆದರೆ ಮತದಾರರಿಗೆ ಈಗ ಅರ್ಥವಾಗಿದೆ ಯಾವ ಪಕ್ಷದ ಆಡಳಿತದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಎಷ್ಟು ಇತ್ತು ಎನ್ನುವುದು. ಮತದಾರರನ್ನು ಸದಾ ಕಾಲವು ವಂಚಿಸಲು ಸಾಧ್ಯವಾಗುವುದಿಲ್ಲ ಎಂದರು.

ಕೃಷಿ ಕಾಯ್ದೆಗಳ ವಿರುದ್ಧದ ಜಾಗೃತಿ ಜಾಥಾ ಉದ್ಘಾಟನೆಯಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಆರ್‌.ಚಂದ್ರತೇಜಸ್ವಿ, ರಾಜ್ಯ ರೈತ ಸಂಘದ ಜಿಲ್ಲಾ ಮುಖಂಡರಾದ ಕೆ.ಸುಲೋಚನಮ್ಮವೆಂಕಟರೆಡ್ಡಿ, ಜಿಲ್ಲಾ ಅಧ್ಯಕ್ಷ ಪ್ರಸನ್ನ, ತಾಲ್ಲೂಕು ಅಧ್ಯಕ್ಷ ಹನುಮೇಗೌಡ, ಕನ್ನಡ ಪಕ್ಷದ ಅಧ್ಯಕ್ಷ ಸಂಜೀವನಾಯ್ಕ್, ಕಾರ್ಯದರ್ಶಿ ಡಿ.ಪಿ.ಆಂಜನೇಯ,ಬಿಎಸ್‌ಪಿ ಮುಖಂಡ ಪುರುಷೋತ್ತಮ, ದಲಿತ ಸಂಘಟನೆಯ ರಾಜುಸಣ್ಣಕ್ಕಿ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.

ರಾಜಕೀಯ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ನಲ್ಲಿ (Congress) ಸೋನಿಯಾ ಗಾಂಧಿ (Soniya Gandhi), ರಾಹುಲ್ ಗಾಂಧಿ, ಪ್ರಿಯಾಕಾಂ ಗಾಂಧಿ (Rahul Gandhi) ಮನಸ್ಸು ಯಾರು ಗೆಲ್ಲುತ್ತಾರೆ ಅವರು ಸಿಎಂ ಆಗುತ್ತಾರೆ. ಇದು ಪ್ರಜಾಪಭುತ್ವದ ವ್ಯವಸ್ಥೆಗೆ ನಾಚಿಗೇಡಿನ ಸಂಗತಿ ಎಂದು

[ccc_my_favorite_select_button post_id="121658"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]