
ದೊಡ್ಡಬಳ್ಳಾಪುರ: ನಗರದ ಸಹ್ಯಾದ್ರಿ ಶಾಲೆಯ ಶಿಕ್ಷಕಿ ಮಂಜುಳ(35) ತೀವ್ರ ಹೃದಯಾಘಾತದಿಂದ ಸಾವನಪ್ಪಿದ್ದಾರೆ.
ಬರಗೂರು ಮೂಲದವರಾದ ಇವರು ನಗರದ ಸಹ್ಯಾದ್ರಿ ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಇಂದು ಸಂಜೆ ಪತಿಯೊಂದಿಗೆ ವಾಯು ಸಂಚಾರ ( ವಾಕಿಂಗ್) ಮಾಡುವ ವೇಳೆ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿ ಸಾವನಪ್ಪಿದ್ದಾರೆ ಎನ್ನಲಾಗಿದೆ.
ಮೃತರಿಗೆ ಪತಿ ಮತ್ತು ಇಬ್ಬರು ಹೆಣ್ಣುಮಕ್ಕಳು ಇದ್ದಾರೆ. ಮೃತರ ಅಂತ್ಯಕ್ರಿಯೆ ಬರಗೂರಿನಲ್ಲಿ ಬುಧವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ಹರಿತಲೇಖನಿಗೆ ತಿಳಿಸಿವೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.

