
ದೊಡ್ಡಬಳ್ಳಾಪುರ: ಕೋವಿಡ್ ಲಸಿಕೆ ವಿತರಣೆ ಸಂಬಂಧಿಸಿದಂತೆ ಜಿಲ್ಲೆಯ ತಾಲ್ಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು ಸೇರಿದಂತೆ ಒಟ್ಟು 06 ಕೋವಿಡ್ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, ಜಿಲ್ಲೆಯಾದ್ಯಂತ ಲಸಿಕೆ ವಿತರಣೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಮೊದಲ ಹಂತದ ಕೋವಿಡ್-19 ಲಸಿಕೆಯನ್ನು ಇಂದಿನಿಂದ ತಾಲೂಕಿನ 1390 ಮಂದಿಗೆ ನೀಡಲು ಕ್ಷಣ ಗಣನೆ ಆರಂಭವಾಗಿದೆ.
ಇಂದು ಬೆಳಗ್ಗೆ 10:30 ಗಂಟೆಗೆ ರಾಷ್ಟ್ರಮಟ್ಟದಲ್ಲಿ ಕೋವಿಡ್ ಲಸಿಕೆ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಅಂತೆಯೇ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಅವರು ಚಾಲನೆ ನೀಡಿದರೆ, ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಚಾಲನೆ ನೀಡಲಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮೊದಲ ಹಂತದ ಕೋವಿಡ್ ಲಸಿಕೆ ವಿತರಿಸಲು ಕೋವಿಡ್ ವಾರಿಯರ್ಸ್ ಗಳಾದ ಆರೋಗ್ಯ ಇಲಾಖೆಯ 880, ಖಾಸಗಿ ಕ್ಷೇತ್ರದ ವೈದ್ಯರು ಮತ್ತು ಸಿಬ್ಬಂದಿಗಳಿಗೆ 510 ಮಂದಿ ಸೇರಿದಂತೆ 1390 ಮಂದಿಗೆ ಲಸಿಕೆ ನೀಡಲಾಗುತ್ತಿದ್ದು, ಕೋವಿಡ್ ಲಸಿಕೆ ನೀಡಲು ಸಾರ್ವಜನಿಕ ಆಸ್ಪತ್ರೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದರು.
ಮೂಲಗಳ ಪ್ರಕಾರ ಇಂದು ಎರಡು ಆಸ್ಪತ್ರೆಗಳಲ್ಲಿ ತಲಾ 100ಮಂದಿಗೆ ಲಸಿಕೆ ಹಾಕಲು ಸಿದ್ದತೆ ಕೈಗೊಳ್ಳಲಾಗಿದೆ..ಅಂತಿಮ ಹಂತದ ಸಿದ್ದತಾ ಕಾರ್ಯ ನಡೆಯುತ್ತಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಮೂಲಕ ನಮ್ಮೊಂದಿಗೆ ಜೊತೆಯಾಗಿ.

