
ಬೆಂ.ಗ್ರಾ.ಜಿಲ್ಲೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2020-21ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಜಿಲ್ಲಾ ಮಟ್ಟದ ಜನಪರ ಉತ್ಸವವನ್ನು 2021ರ ಫೆಬ್ರವರಿ ಮೊದಲ ವಾರದಲ್ಲಿ ಹಾಗೂ ಗಿರಿಜನ ಉಪ ಯೋಜನೆಯಡಿ ಜಿಲ್ಲಾ ಮಟ್ಟದ ಗಿರಿಜನ ಉತ್ಸವವನ್ನು 2021ರ ಜನವರಿ ಕೊನೆಯ ವಾರದಲ್ಲಿ ದೇವನಹಳ್ಳಿ ತಾಲ್ಲೂಕಿನಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಲು ಅರ್ಹ ಮಹಿಳಾ ಅಭ್ಯರ್ಥಿಗಳು ಹಾಗೂ ಅಂಗವಿಕಲರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಮಟ್ಟದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿಚ್ಛಿಸುವ ಆಸಕ್ತ ಕಲಾವಿದರು ಮಹಿಳಾ ಅಭ್ಯರ್ಥಿಗಳು ಹಾಗೂ ಅಂಗವಿಕಲರಾಗಿದ್ದು, 18 ರಿಂದ 40 ವರ್ಷದ ಒಳಗಿನವರಾಗಿರಬೇಕು. ಕಲಾವಿದರು ತಾಲ್ಲೂಕು/ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಪ್ರದರ್ಶನ ನೀಡಿರುವ ಬಗ್ಗೆ 4 ರಿಂದ 6 ಛಾಯಾಚಿತ್ರಗಳನ್ನು ಅರ್ಜಿಯೊಂದಿಗೆ ಸಲ್ಲಿಸುವುದು.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಕಡ್ಡಾಯವಾಗಿ ಜಾತಿ ಪ್ರಮಾಣಪತ್ರ(RD ಸಂಖ್ಯೆ ಇರುವ), ಆಧಾರ ಕಾರ್ಡ್, ರೇಷನ್ ಕಾರ್ಡ್ ಗಳ ನಕಲು ಪ್ರತಿಗಳೊಂದಿಗೆ 2021ರ ಜನವರಿ 20ರೊಳಗೆ ಅರ್ಜಿಯನ್ನು ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಿಲ್ಲಾಡಳಿತ ಭವನ, ಚಪ್ಪರಕಲ್ಲು, ದೇವನಹಳ್ಳಿ ತಾಲ್ಲೂಕು ಹಾಗೂ ದೂ.ಸಂ.:080-29560059 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಾಯಕ ನಿರ್ದೇಶಕರಾದ ಬಿ.ಮಂಜುನಾಥ ಆರಾಧ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಮೂಲಕ ನಮ್ಮೊಂದಿಗೆ ಜೊತೆಯಾಗಿ.

