ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಅಭಿನಂದನಾ ಸಮಾರಂಭ

ದೊಡ್ಡಬಳ್ಳಾಪುರ: ಗ್ರಾಮೀಣ ಜನರಿಗೆ ಸರ್ಕಾರದ ಸೌಲಭ್ಯ ನೇರವಾಗಿ ತಲುಪಿಸಲು ಸೇತುವೆಯಾದ ಗ್ರಾಮಪಂಚಾಯಿತಿಗಳಿಗೆ ಮಾಜಿ ಪ್ರಧಾನಿ ದಿ.ರಾಜೀವ್‍ಗಾಂಧಿ ಶಕ್ತಿ ತುಂಬಿದರು, ಆದರೆ ಇತ್ತೀಚಿನ ದಿನಗಳಲ್ಲಿ ಗ್ರಾಮಪಂಚಾಯಿತಿ ಚುನಾವಣೆಯ ಪರಿಸ್ಥಿತಿ ಬದಲಾವಣೆಯಾಗಿದೆ ಎಲ್.ಹನುಮಂತಯ್ಯ ಹೇಳಿದರು.

ಇತ್ತೀಚಿಗೆ ನಡೆದ ಗ್ರಾಮಪಂಚಾಯಿತಿ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಕಾಂಗ್ರೆಸ್ ಸಮಿತಿವತಿಯಿಂದ ಆಯೋಜಿಸಿದ್ದ ಅಭಿನಂದನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಗ್ರಾಮಪಂಚಾಯಿತಿಗಳನ್ನು ಸದೃಡಗೊಳಿಸುವ ಹೊಣೆ ಯುವ ಸದಸ್ಯರ ಮೇಲಿದೆ ಎಂದು ನೂತನ ಸದಸ್ಯರಿಗೆ ಕರೆ ನೀಡಿದರು. ಗ್ರಾಮಪಂಚಾಯಿತಿ ಚುನಾವಣೆಗಳ ಪರಿಸ್ಥಿತಿ ಬದಲಾವಣೆಯಾಗಿದೆ. ದೇಶದ ಗ್ರಾಮಪಂಚಾಯಿತಿಗಳಿಗೆ ಶಕ್ತಿ ತುಂಬಿದ ಕಾಂಗ್ರೆಸ್ ನಾಯಕರ ಉದ್ದೇಶವನ್ನು ಸಾಕಾರಗೊಳಿಸಬೇಕಿದೆ. ಮಹಿಳಾ ಮೀಸಲಾತಿ ಮೂಲಕ ಮಹಿಳೆಯರಿಗೆ ಒಲಿದು ಬಂದ ಅಧಿಕಾರವನ್ನು ಸದುಪಯೋಗ ಮಾಡಿಕೊಳ್ಳಬೇಕು. ಮಹಿಳೆಯರು ಪುರಷರಿಗಿಂತ ಕಡಿಮೆ ಏನೂ ಇಲ್ಲ. ಹೀಗಾಗಿ ಗ್ರಾಮಪಂಚಾಯಿತಿಗಳಲ್ಲಿ ಮಹಿಳೆಯ ಪಾತ್ರ ಹಿರಿಯದಿದೆ. ಈ ಪ್ರಜ್ಞೆಯ ಮೂಲಕ ಮಹಿಳೆಯರು ಕಾರ್ಯ ನಿರ್ವಹಿಸಲಿ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ತಾಲೂಕಿನಲ್ಲಿ ನಾನು ಶಾಸಕನಾದ ನಂತರ ಕುಂಟಿತವಾಗಿದ್ದ ಬಹುತೇಕ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಿದ್ದೇನೆ. ಹೀಗಾಗಿ ತಾಲೂಕಿನಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಳೆದ ಭಾರಿ ಮತ್ತು ಈ ಭಾರಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ತಾಲೂಕಿನ ಜನ ಗೆಲ್ಲಿಸಿಕೊಟ್ಟಿಕೊಟ್ಟಿದ್ದಾರೆ. ಹೀಗಾಗಿ ನೂತನ ಸದಸ್ಯರು ಗ್ರಾಮಗಳ ಅಭಿವೃದ್ಧಿಗೆ ಕಾಯಾ ವಾಚಾ ಮನಸ ಶ್ರಮಿಸುವ ಮೂಲಕ ಜನಗಳ ನಂಬಿಕೆಯನ್ನು ಉಳಿಸಿಕೊಳ್ಳಬೇಕು ಎಂದು ನೂತನ ಸದಸ್ಯರಿಗೆ ಕಿವಿ ಮಾತು ಹೇಳಿದರು.  

ವಿಧಾನ ಪರಿಷತ್ ಸದಸ್ಯ ರವಿ ಮಾತನಾಡಿ, ಗ್ರಾಮ ಪಂಚಾಯಿತಿಗಳು ದೇಶದ ಅಭಿವೃದ್ಧಿಯಲ್ಲಿ ಅಡಿಪಾಯಗಳಾಗಿವೆ. ಈ ಹಂತದಲ್ಲಿ ಗ್ರಾಮಗಳು ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿ ಕಾಣುವಲ್ಲಿ ಯಾವುದೇ ಸಂಶಯವಿಲ್ಲ. ಇಷ್ಟಕ್ಕೆ ಪಕ್ಷದ ಕಾರ್ಯಕರ್ತರು ಸಾಮಾಧಾನ ಮಾಡಿಕೊಳ್ಳದೆ ಪಕ್ಷವನ್ನು ಸದೃಡಗೊಳಿಸುವಲ್ಲಿ ಚುನಾಯಿತ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಶ್ರಮಿಸಬೇಕು ಎಂದು ಅವರು ತಿಳಿಸಿದರು.

ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಚುಂಚೇಗೌಡ, ಬಮೂಲ್ ನಿರ್ದೇಶಕ ಬಿ.ಸಿ.ಆನಂದ್‍ಕುಮಾರ್, ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ, ಮಾಜಿ ಅಧ್ಯಕ್ಷ ಡಿ.ಸಿ.ಶಶಿಧರ್, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಿಪ್ಪೂರು ಬೈರೇಗೌಡ, ಟಿಪಿಎಂಸಿಎಸ್ ಅಧ್ಯಕ್ಷ ಸಿದ್ದರಾಮಣ್ಣ, ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮಿಪತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆದಿತ್ಯ ನಾಗೇಶ್, ಕಸಬಾ ಬ್ಲಾಕ್ ಅಧ್ಯಕ್ಷ ವೆಂಕಟೇಶ್(ಅಪ್ಪಿ), ಕಾಂಗ್ರೆಸ್ ಮುಖಂಡರಾದ ಅಪಕಾರನಹಳ್ಳಿ ಶ್ರೀನಿವಾಸ್, ರಾಮಣ್ಣ, ಅಂಜನಮೂರ್ತಿ, ಮುನಿರಾಜು, ಟಿ.ಡಿ.ಮುನಿಯಪ್ಪ ಸೇರಿದಂತೆ ವಿವಿಧ ಘಟಕಗಳ ಮುಖಂಡರು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಮೂಲಕ ನಮ್ಮೊಂದಿಗೆ ಜೊತೆಯಾಗಿ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]