ಕಾಣುವ “ಕೈ”ಯೊಳಗಿನ ಗೊಂಬೆಗಳು / ಬೆತ್ತಲೆ ಸತ್ಯ-ಸುಳ್ಳಿನ ಸೆರಗು

ದೇಶದ ಇತಿಹಾಸದಲ್ಲಿ ಅತಿದೊಡ್ಡ ರೈತ ಪ್ರತಿಭಟನೆ ‘ಎನ್ನಿಸಿಕೊಂಡ’ ಕಿಸಾನ್ ರ‌್ಯಾಲಿಯು ಶುರುವಾಗಿ ಬರೋಬ್ಬರಿ 165 ದಿನಗಳು ಕಳೆದವು.  ಅಂದಿನಿಂದ ಇಂದಿನವರೆಗೂ ಸರ್ಕಾರ ಹಾಗೂ ರೈತ ಸಂಘಟನೆಗಳ ನಡುವಣ ಒಂಭತ್ತು ಸಂಧಾನ ಸಭೆ ನಡೆದರೂ ಯಾವುದೂ ಯಶಸ್ವಿಯಾಗಲಿಲ್ಲ. ಕೇಂದ್ರ ಸರ್ಕಾರ ಇತ್ತೀಚೆಗೆ ತಿದ್ದುಪಡಿ ಮಾಡಲಾದ ಕೃಷಿ ಕಾಯಿದೆಗಳ ವಿರೋಧಿಸಿ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಅಷ್ಟಕ್ಕೂ ರೈತರು ಈ ಮಟ್ಟದಲ್ಲಿ ಆ ಕಾಯಿದೆಯ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿರುವ ಹಿಂದೆ ” ಕಾಣುವ ಕೈ”ಗಳ ಹಸ್ತಕ್ಷೇಪ ಇರುವ ಆರೋಪ ಕೇಳಿಬರಲಾರಂಭಿಸಿದೆ.

ನಾವು ಈ ಪ್ರತಿಭಟನೆಯ ಆರಂಭದ ದಿನಗಳ ಘಟನಾವಳಿಗಳನ್ನು ಗಮನಿಸಿದಾಗ ಅದು ಕೇವಲ ರೈತರ ಪ್ರತಿಭಟನೆಯಾಗಿರಲಿಲ್ಲ. ಬದಲಿಗೆ ಅಲ್ಲಿ ದೇಶ ವಿರೋಧಿ ಘೋಷಣೆಗಳು ಮೊಳಗಿದ್ದವು ಎಂಬ ಆರೋಪ. ತದ ನಂತರದಲ್ಲಿ ದೇಶದ್ರೋಹ ಪ್ರಕರಣಗಳಲ್ಲಿ ಬಂಧಿಯಾಗಿರುವ ಮುಖಂಡರ ಬಿಡುಗಡೆಗೆ ಒತ್ತಾಯಿಸಿ ಆಗ್ರಹಗಳು ಕೇಳಿಬಂದವು. ಇಷ್ಟೇ ಅಲ್ಲದೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುತೇಕರು ರೈತರೇ ಅಲ್ಲ ಎಂಬುದು ಸಹ ಬಯಲಾಗಿತ್ತು.

ಹಾಗಾದರೆ ಅಲ್ಲಿ ಪ್ರತಿಭಟನೆ ನಡೆಸುತ್ತಿರುವವರು ರೈತರೇ ಅಲ್ಲವೇ? ಎಂಬ ಪ್ರಶ್ನೆಗೆ ಉತ್ತರ: ಬಹುತೇಕರು ರೈತರಲ್ಲ ಎನ್ನಲಾಗುತ್ತಿದೆ.

ನೇರವಾಗಿ ಹೇಳಬೇಕೆಂದರೆ, ಇದೊಂದು ಪೂರ್ವ ನಿಯೋಜಿತ “ಷಡ್ಯಂತ್ರ”. ಎನ್ನುವ ಆರೋಪ ವ್ಯಾಪಕವಾಗಿದೆ. ಮೇಲೆ ತಿಳಿಸಿದ ಅಂಶಗಳ ಜೊತೆಗೆ

ಇದಕ್ಕೆ ಇಂಬು ನೀಡುವಂತಹ ಇನ್ನೂ ಕೆಲವು ಅಂಶಗಳಿವೆ. ಈ ಹೋರಾಟಕ್ಕೆ ಆರ್ಥಿಕ ನೆರವು ನೀಡಿರುವ ವಿರೋಧ ಪಕ್ಷದ ಇಂಗಿತವೇನೆಂದರೆ, ಪ್ರಸ್ತುತ ಕೇಂದ್ರ ಸರ್ಕಾರ ತಂದಿರುವ ಪರಿಷ್ಕೃತ ಕಾಯಿದೆಯಿಂದಾಗಿ ಪಂಜಾಬ್ ರಾಜ್ಯದ ಕಾಂಗ್ರೆಸ್ ಮುಖಂಡರ ” ಗೋಧಿ ಕಮೀಷನ್ ” ನಿಲ್ಲುವುದು ಒಂದೆಡೆಯಾದರೆ, ಜಾಗತಿಕ ಮಟ್ಟದಲ್ಲಿ ಪ್ರಧಾನಿ ಮೋದಿಗೆ ಮುಖಭಂಗ ಮಾಡುವ ಕಾಂಗ್ರೆಸ್ ಪಕ್ಷದ ಪ್ರಯತ್ನಗಳೆಲ್ಲವೂ ವಿಫಲವಾದದ್ದು ಇನ್ನೊಂದು ಎನ್ನಬಹುದು.

ಅಷ್ಟೇ ಅಲ್ಲದೇ ಪ್ರತಿಭಟನೆಯಲ್ಲಿ ಭಾಗವಹಿಸಿರುವ ಜನ ಸರಬರಾಜಿನ ಉಸ್ತುವಾರಿ ವಹಿಸಿರುವುದು ಕಮ್ಯುನಿಸ್ಟ್ ಪಕ್ಷಗಳು. ಇದಕ್ಕೂ ಕಾರಣ ಇಲ್ಲದಿಲ್ಲ.

ಭಾರತದಲ್ಲಿ ಮೋದಿ ಮೇನಿಯಾ ಶುರುವಾದ ಮೇಲೆ ಕಾಂಗ್ರೆಸ್ ತನ್ನ ಅಸ್ತಿತ್ವವನ್ನು ಎಷ್ಟು ಪ್ರಮಾಣದಲ್ಲಿ ಕಳೆದುಕೊಂಡಿದೆಯೋ..ಅಷ್ಟೇ ಪ್ರಮಾಣದಲ್ಲಿ ಬಂಗಾಳ ಹೊರತುಪಡಿಸಿ ದೇಶದೆಲ್ಲೆಡೆ ಕಮ್ಯುನಿಸ್ಟ್ ಸಹ ತನ್ನ ಅಸ್ತಿತ್ವವನ್ನು ಕಳೆದುಕೊಂಡಿದೆ. ಅವೆಲ್ಲಕ್ಕಿಂತ ಮಿಗಿಲಾಗಿ ಕಮ್ಯುನಿಸ್ಟರ ಮೂಲವಾದಚಚೀನಾಗೆ ಭಾರತ ದೇಶ ಮೋದಿ ನೇತೃತ್ವದಲ್ಲಿ ಎಲ್ಲಾ ದಿಕ್ಕುಗಳಿಂದಲೂ ಛಡಿಯೇಟು ನೀಡಿರುವುದು.

ಇದೆಲ್ಲಾ ಕಾರಣಗಳಿಂದಲೇ ರೈತರ ಹೆಸರಿನಲ್ಲಿ ಶುರುವಾದ ಪ್ರತಿಭಟನೆ ದಿಕ್ಕುತಪ್ಪಿರುವುದು. ಇದಷ್ಟೇ ಅಲ್ಲದೇ ಪಂಜಾಬ್ ಮತ್ತು ಹರಿಯಾಣಗಳಲ್ಲಿ ರಿಲಯನ್ಸ್ ಜಿಯೋ ಮಾಲಿಕತ್ವದ ಸಾವಿರಾರು ಟವರ್‌ ಸ್ಥಂಭಗಳನ್ನು ಜಖಂಗೊಳಿಸಲಾಗಿದೆ. ನಿಜವಾದ ರೈತರಾರೂ ಇಂತಹ ಕುಕೃತ್ಯಗಳನ್ನು ಮಾಡುವುದಿಲ್ಲ ಎಂಬುದು ಇಡೀ ದೇಶಕ್ಕೇ ಗೊತ್ತಿದೆ. ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಬೆರಳೆಣಿಕೆಯಷ್ಟು ಮುಗ್ಧ ರೈತರು “ಕೈ”ಗೊಂಬೆಗಳು ಎಂಬುದು ತಿಳಿದ ವಿಷಯವೇ..

ಇದೆಲ್ಲದರ ನಡುವೆ ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ಮಧ್ಯೆ ಪ್ರವೇಶ ಮಾಡಿದ್ದು, ಸಂಸತ್ತು‌ ಜಾರಿಗೆ ತಂದ ಕಾಯ್ದೆಯನ್ನು ನ್ಯಾಯಾಲಯ ತಡೆ ನೀಡಬಹುದೇ…ಹಾಗೊಂದು ವೇಳೆ ಮಾಡಿದರೆ ಸಂವಿಧಾನಿಕ ಬಿಕ್ಕಟ್ಟು ಉಂಟಾಗಲಿದೆ ಎಂಬ ಚರ್ಚೆಗಳು ನಡೆಯುತ್ತಿವೆ.

ಏನೇ ಆದರೂ ಮೋದಿಯನ್ನು ಜಾಗತಿಕ ಮಟ್ಟದಲ್ಲಿ ಹಣಿಯಲೇಬೇಕೆಂಬ ಹಟಕ್ಕೆ ಬಿದ್ದಿರುವ ಮೋದಿ ವಿರೋಧಿಗಳು ಒಟ್ಟಾಗಿ ದಶದಿಕ್ಕುಗಳಿಂದಲೂ ಕುತಂತ್ರ ಹೆಣೆದು ರೈತರ ಹೆಸರಿನಲ್ಲಿ ಒಮ್ಮೆಲೇ ಪ್ರಯತ್ನಿಸಿದ್ದಾರೆ. ಹಾ… ಕೊನೆಯದಾಗಿ ಇನ್ನೊಂದು ಮಾತು.

ಬೆತ್ತಲೆಯಾಗಿರುವ ಸತ್ಯಕ್ಕೆ ಸುಳ್ಳಿನ ಸೆರಗನ್ನು ಮುಚ್ಚಿ, ಸುಳ್ಳನ್ನೇ ಸತ್ಯವಾಗಿಸುವ ಕಾಂಗ್ರೆಸ್ ಹಾಗೂ ಕಮ್ಯುನಿಸ್ಟರ ಎಷ್ಟೋ ವಿಫಲ ಯತ್ನಗಳ (CAA,ರಫೇಲ್) ಮುಂದುವರಿದ ಭಾಗವೇ ಇದು ಎಂಬುದು ಜಾಗತಿಕವಾಗಿ ಬೆತ್ತಲಾಗಿರುವ ಮತ್ತೊಂದು ಸತ್ಯ…….ಇಂತಿ ನಿಮ್ಮವ…ಜಿ.ಎನ್.ಪ್ರದೀಪ್

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಮೂಲಕ ನಮ್ಮೊಂದಿಗೆ ಜೊತೆಯಾಗಿ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]