
ಬೆಂಗಳೂರು: ಇತ್ತೀಚೆಗೆ ರಾಜ್ಯಪಾಲರಿಂದ ರಾಷ್ಟ್ರಪತಿಗಳ ಅತ್ಯುತ್ತಮ ಸೇವಾ ಪದಕ ಪುರಸ್ಕೃತರಾದ ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ಟಿ.ರಂಗಪ್ಪ ರವರನ್ನು ವಾತ್ಸಲ್ಯ ಧಾಮ ಚಾರಿಟಬಲ್ ಟ್ರಸ್ಟ್ ಸದಸ್ಯರು ಸನ್ಮಾನಿಸಿದರು.
ದೊಡ್ಡಬಳ್ಳಾಪುರದ ಡಿವೈಎಸ್ಪಿ ಕಚೇರಿಯಲ್ಲಿ, ವಾತ್ಸಲ್ಯ ಧಾಮ ಚಾರಿಟಬಲ್ ಟ್ರಸ್ಟ್ ಗೌರವಾಧ್ಯಕ್ಷೆ ಲೀಲಾವತಿ ಅವರ ನೇತೃತ್ವದಲ್ಲಿ ಸದಸ್ಯರು ಡಿವೈಎಸ್ಪಿ ಟಿ.ರಂಗಪ್ಪರಿಗೆ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಡಿವೈಎಸ್ಪಿ ಟಿ.ರಂಗಪ್ಪ, ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕ ನಡುವಿನ ಸಂಬಂಧ ಅತ್ಯಂತ ಅನ್ಯೋನ್ಯವಾಗಿರಬೇಕು. ಸಂಘ ಸಂಸ್ಥೆಗಳು ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಕಂಡುಬರುವ ಕಾನೂನು ಬಾಹಿರ ಚಟುವಟಿಕೆಗಳ ಬಗ್ಗೆ ಗಮನಹರಿಸಿ ತಕ್ಷಣವೇ ಪೊಲೀಸರಿಗೆ ತಿಳಿಸುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಹೊಣೆಗಾರಿಕೆ ಅರಿಯಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷೆ ಲೀಲಾವತಿ, ಅಧ್ಯಕ್ಷ ವೈ.ಎನ್.ಅರ್ಜುನ್, ಖಜಾಂಚಿ ಕೆ.ಪವನ್, ನಿರ್ದೇಶಕರಾದ ಗಗನ್ ಜಿ.ಕೃಷ್ಣ, ಕೆ.ದೀಕ್ಷಾ, ಕೀರ್ತನ, ಹರ್ಷಿತ, ಟಿ.ಇ.ದನುಜ, ಮಧುಸೂದನ್, ನಾಗೇಶ್ ಯಾದವ್, ಆರ್.ಮನೋಜ್ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಮೂಲಕ ನಮ್ಮೊಂದಿಗೆ ಜೊತೆಯಾಗಿ.

