
ಬೆಂ.ಗ್ರಾ.ಜಿಲ್ಲೆ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆಗೆ ಮಹತ್ವ ನೀಡುತ್ತಿದ್ದು, ಈ ನಿಟ್ಟಿನಲ್ಲಿ MOFPI (Ministry of food processing industries)ರಡಿ PMFME, Kisan Samada ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ಅನುಷ್ಟಾನಗೊಳ್ಳುತ್ತಿರುವ ಕೇಂದ್ರವಲಯ ಯೋಜನೆಗಳಾದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಗಳನ್ನು ರೂಪಿಸಲಾಗಿದೆ. ಸಂಸ್ಕರಣಾ ಘಟಕಗಳಿಗೆ ಸಹಾಯಧನ ನೀಡಲಾಗುವುದರಿಂದ ಜಿಲ್ಲೆಯ ರೈತರು/FPOs/SHGs/ ಹೂಡಿಕೆದಾರರು/ಉದ್ಯಮಿಗಳು ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ತೋಟಗಾರಿಕೆ ಬೆಳೆಗಳ ಸಂಸ್ಕರಣೆಗೆ ಸಂಬಂಧಿಸಿದ ಪ್ರಸ್ತಾವನೆಗಳಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತೋಟಗಾರಿಕೆ ಉತ್ಪನ್ನಗಳು ವಿಶೇಷವಾಗಿ ಹಣ್ಣು ಮತ್ತು ತರಕಾರಿಗಳು ಅತಿ ಶೀಘ್ರವಾಗಿ ಹಾಳಾಗುವ ಗುಣವನ್ನು ಹೊಂದಿದ್ದು, ಕೊಯ್ಲೋತ್ತರ ನಿರ್ವಹಣೆಯ ಹಂತದಲ್ಲಿ ಸಂಸ್ಕರಣೆಯು ಪ್ರಮುಖ ಪಾತ್ರ ವಹಿಸುತ್ತದೆ. ಸಂಸ್ಕರಣೆಯಿಂದ ಉತ್ಪನ್ನಗಳ ಸರಬರಾಜು ಮತ್ತು ಬೆಲೆ ನಿಯಂತ್ರಣ ಸಾಧ್ಯವಾಗಲಿದೆ.
ಪ್ರಸ್ತಾವನೆ ಸಲ್ಲಿಸಲು ಆಸಕ್ತ ರೈತರು ತಮ್ಮ ಜಮೀನು ವ್ಯಾಪ್ತಿಯ ಹೋಬಳಿಯ ರೈತ ಸಂಪರ್ಕ ಕೇಂದ್ರ/ತಾಲ್ಲೂಕು ಕಚೇರಿಯ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಪ್ರಸ್ತಾವನೆಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕರು(ಜಿಪಂ), ದೂ.ಸಂ.: 080-29787453, ಮೊ.ಸಂ.: 9448999214, ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ದೂ.ಸಂ.: 080-27623770, ಮೊ.ಸಂ.: 9632410677, ದೇವನಹಳ್ಳಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ದೂ.ಸಂ.: 080-27681204, ಮೊ.ಸಂ.: 9448825101, ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ದೂ.ಸಂ.: 080-27904760, ಮೊ.ಸಂ.: 9538953949, ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ದೂ.ಸಂ.:080-27726213, ಮೊ.ಸಂ.: 9901754339 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕರು(ಜಿಪಂ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ.

